ದೇಶ- ವಿದೇಶ

Pahalgam Terrassit attack ; ತನಿಖೆ ಚುರುಕುಗೊಳಿಸಿದ ಎನ್‌ಐಎ

ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎ ತನಿಖೆಗೆ ವಹಿಸಿದ್ದು, ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆಂದು ತಿಳಿದುಬಂದಿದೆ.

ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಇ-ತೊಯ್ಬಾಗೆ ಸಂಬಂಧಿಸಿದ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ.

ಈ ಹಿನ್ನೆಲೆಯಲ್ಲಿ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಗೃಹ ಸಚಿವಾಲಯದ ಭಯೋತ್ಪಾದನಾ ನಿಗ್ರಹ ಮತ್ತು ಪ್ರತಿ-ಆಮೂಲಾಗ್ರೀಕರಣ ವಿಭಾಗವು ತನಿಖೆಯನ್ನು ಎನ್‌ಐಗೆ ವಹಿಸಿದ್ದು, ಹೊಸ ಎಫ್ಐಆರ್‌ಅನ್ನು ದಾಖಲಿಸಿದೆ.

ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಎನ್‌ಐಎ, ಭಯೋತ್ಪಾದಕ ದಾಳಿಯಲ್ಲಿ ಬದುಕುಳಿದವರ ಹೇಳಿಕೆಗಳನ್ನು ದಾಖಲಿಸಿದೆ.

ಈ ನಡುವೆ ಗುಪ್ತಚರ ಸಂಸ್ಥೆಗಳು ಕೇಂದ್ರಾಡಳಿತ ಪ್ರದೇಶದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ 14 ಸ್ಥಳೀಯ ಭಯೋತ್ಪಾದಕರ ಪಟ್ಟಿಯನ್ನು ಸಂಗ್ರಹಿಸುತ್ತಿದ್ದು, ಇದರ ನಡುವಲ್ಲೇ ಎನ್‌ಐಎ ತನಿಖೆ ಆರಂಭವಾಗಿದೆ.

ಈ ಉಗ್ರರು, ಹಿಜ್ಬುಲ್ ಮುಜಾಹಿದ್ದೀನ್, ಲಷ್ಕರ್-ಇ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದಾರೆಂದು ತಿಳಿದುಬಂದಿದೆ.

ಪಟ್ಟಿಯಲ್ಲಿರುವ 14 ಮಂದಿ ಭಯೋತ್ಪಾದಕರು ದಕ್ಷಿಣ ಕಾಶ್ಮೀರದಾದ್ಯಂತ, ವಿಶೇಷವಾಗಿ ಅನಂತ್‌ನಾಗ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಸಕ್ರಿಯವಾಗಿದ್ದಾರೆಂದು ಹೇಳಲಾಗುತ್ತಿದ್ದು, ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಚುರುಕುಗಳಿಸಿದೆ.

ಆಂದೋಲನ ಡೆಸ್ಕ್

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

8 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

8 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

8 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

8 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

8 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

8 hours ago