ಜಮ್ಮು-ಕಾಶ್ಮೀರ: ಇಲ್ಲಿನ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎ ಹೆಗಲಿಗೆ ವಹಿಸಿದೆ.
ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿರುವ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಿದ್ದು, ಪ್ರಕರಣ ದಾಖಲಿಸಿಕೊಂಡು ಅಧಿಕೃತವಾಗಿ ತನಿಖೆ ಶುರು ಮಾಡಲಿದೆ ಎಂದು ವರದಿಗಳು ತಿಳಿಸಿವೆ.
ತನಿಖೆಯ ಪ್ರಕಾರ ಈಗಾಗಲೇ ಎನ್‌ಐಎ ತಂಡ ಪಹಲ್ಗಾಮ್‌ಗೆ ತಲುಪಿದೆ. ಮತ್ತೊಂದೆಡೆ ಸ್ಥಳೀಯ ಪೊಲೀಸರಿಂದ ಡೈರಿ, ಎಫ್‌ಐಆರ್ ಹಾಗೂ ಈ ವಿಷಯಕ್ಕೆ ಸಂಬಂಧಿಸಿದ ಇತರ ಪ್ರಮುಖ ದಾಖಲೆಗಳನ್ನು ಸುಪರ್ಧಿಗೆ ಪಡೆದುಕೊಳ್ಳಲು ಎನ್‌ಐಎ ಮುಂದಾಗಿದೆ.





