Mysore
18
broken clouds

Social Media

ಶುಕ್ರವಾರ, 23 ಜನವರಿ 2026
Light
Dark

ಪಾಕ್-ಅಫ್ಗಾನಿಸ್ತಾನ ಸಂಘರ್ಷ : ಕಂದಹಾರ್‌ ಮೇಲೆ ಪಾಕ್‌ ವೈಮಾನಿಕ ದಾಳಿ, ಸಾವಿನ ಶಂಕೆ

ಕಾಬುಲ್ : ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಅಫ್ಗಾನಿಸ್ತಾನದ ಕಂದಹಾರ್ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದೆ. ಈ ದಾಳಿಯಲ್ಲಿ ಹಲವು ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿ ತಿಳಿಸಿದೆ.

ಪಾಕಿಸ್ತಾನ ಬುಧವಾರ ಅಫ್ಗಾನಿಸ್ತಾನದ ಕಂದಹಾರ್ ಪ್ರಾಂತ್ಯದಲ್ಲಿ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಮಂಗಳವಾರ ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ ಅಫ್ಗಾನಿಸ್ತಾನದಲ್ಲಿ 12ಕ್ಕೂ ಹೆಚ್ಚು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಬುಧವಾರ ಮಧ್ಯಾಹ್ನದ ವರದಿ ಪ್ರಕಾರ ಪಾಕಿಸ್ತಾನಿ ಸೇನೆಯು ಕನಿಷ್ಠ 40 ಮಂದಿ ಅಫ್ಗಾನಿಸ್ತಾನದ ತಾಲಿಬಾನ್ ದಾಳಿಕೋರರನ್ನು ಕೊಂದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:-2 ದಿನಗಳಲ್ಲಿ 3 ಹುಲಿ ಮರಿಗಳು ಪತ್ತೆ, ರಕ್ಷಣೆ ; ತಾಯಿ ಹುಲಿ ಪತ್ತೆಗೆ ಮುಂದುವರಿದ ಕೂಂಬಿಂಗ್

ಪಾಕಿಸ್ತಾನದಲ್ಲಿ ದಾಳಿಗಳನ್ನು ಹೆಚ್ಚಿಸಿರುವ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅಫ್ಗಾನಿಸ್ತಾನದ ತಾಲಿಬಾನ್ ಸರ್ಕಾರವನ್ನು ಪಾಕಿಸ್ತಾನ ಒತ್ತಾಯಿಸಿತ್ತು. ಅಫ್ಗಾನಿಸ್ತಾನದಿಂದಲೇ ಉಗ್ರರು ಕಾರ್ಯಾಚರಿಸುತ್ತಿದ್ದಾರೆ ಎಂದು ಪಾಕಿಸ್ತಾನ ಹೇಳಿತ್ತು. ಅದಾದ ಬಳಿಕ ಈ ಬೆಳವಣಿಗೆ ನಡೆದಿದೆ.

Tags:
error: Content is protected !!