Mysore
18
overcast clouds

Social Media

ಗುರುವಾರ, 01 ಜನವರಿ 2026
Light
Dark

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ ದಾಳಿ ನಡೆಸಿರುವುದನ್ನು ಪಾಕಿಸ್ತಾನ ಒಪ್ಪಿಕೊಂಡಿದೆ.

26 ಮಂದಿಯ ಸಾವಿಗೆ ಕಾರಣವಾದ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ಮೇಲೆ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿತ್ತು. ಪಾಕಿಸ್ತಾನದ ಮಿಲಿಟರಿ ನೆಲೆಯನ್ನು ಗುರಿಯಾಗಿಸಿಕೊಂಡು ಭಾರತ ನಡೆಸಿದ ದಾಳಿಯಲ್ಲಿ ನೂರ್ ಖಾನ್ ವಾಯುನೆಲೆಯಲ್ಲಿ ಸಣ್ಣ ಪ್ರಮಾಣದ ಹಾನಿ ಉಂಟಾಗಿತ್ತು ಎಂದು ಪಾಕಿಸ್ತಾನದ ಉಪಪ್ರಧಾನಿ ಹಾಗೂ ವಿದೇಶಾಂಗ ಸಚಿವ ಇಶಾಕ್ ದಾರ್ ಹೇಳಿದ್ದಾರೆ.

ಇದನ್ನು ಓದಿ: ನಟ ಸಲ್ಮಾನ್‌ ಖಾನ್‌ ಭಯೋತ್ಪಾದಕ ಪಟ್ಟ ಕಟ್ಟಿದ ಪಾಕಿಸ್ತಾನ : ಕಾರಣವೇನು.?

ವರ್ಷಾಂತ್ಯದ ಸುದ್ದಿಗೋಷ್ಠಿಯಲ್ಲಿ ಇಶಾಕ್ ದಾರ್ ಈ ಕುರಿತು ಮಾತನಾಡಿದ್ದು, ಭಾರತದ ದಾಳಿಯನ್ನು ಸಮರ್ಥವಾಗಿ ಎದುರಿಸಲಾಗಿದ್ದು, ತಕ್ಕ ತಿರುಗೇಟು ನೀಡಲಾಗಿತ್ತು ಎಂದಿದ್ದಾರೆ. ಪಾಕಿಸ್ತಾನದ ಕಡೆಗೆ ಭಾರತ ನಿರಂತರವಾಗಿ ಡ್ರೋನ್ ದಾಳಿಯನ್ನು ನಡೆಸಿತ್ತು. 36 ತಾಸಿನಲ್ಲಿ ಕನಿಷ್ಠ 80 ಡ್ರೋನ್‌ಗಳನ್ನು ರವಾನಿಸಿತ್ತು. ಇವುಗಳ ಪೈಕಿ 79 ಡ್ರೋನ್‌ಗಳನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾದೆವು. ಆದರೆ ಒಂದು ಡ್ರೋನ್ ಮಿಲಿಟರಿ ನೆಲೆಯ ಮೇಲೆ ಸಣ್ಣ ಪ್ರಮಾಣದಲ್ಲಿ ಹಾನಿಗೊಳಿಸಿತು. ದಾಳಿಯಲ್ಲಿ ಸಿಬ್ಬಂದಿ ಗಾಯಗೊಂಡರು ಎಂದು ಅವರು ಹೇಳಿದ್ದಾರೆ.

Tags:
error: Content is protected !!