ದೇಶ- ವಿದೇಶ

ಕಾಬೂಲ್‌ ಆಸ್ಪತ್ರೆ ಮೇಲೆ ಪಾಕ್‌ ದಾಳಿ : 400 ಮಂದಿ ಸಾವು; ಭಾರತ ಖಂಡನೆ

ಕಾಬೂಲ್‌ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 400 ಮಂದಿ ಮೃತಪಟ್ಟಿದ್ದಾರೆ. ಜತೆಗೆ 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಸೋಮವಾರ ರಾತ್ರಿಯ ವೇಳೆ ಕಾಬೂಲ್‌ನಲ್ಲಿರುವ ಓಮಿದ್‌ ಪುನರ್ವಸತಿ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ದಾಳಿ ನಡೆಸಿದೆ ಎಂದು ಅಫ್ಘಾನ್‌ ಸರ್ಕಾರ ಮಾಹಿತಿ ನೀಡಿದೆ.

ಆಸ್ಪತ್ರೆ ಬಹುಭಾಗ ಧ್ವಂಸಗೊಂಡಿದ್ದು, ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ಸಾಗಿವೆ. ಸಾವು-ನೋವಿನ ಸಂಖ್ಯೆ ಏರಿಕೆ ಆಗುವ ಸಾಧ್ಯತೆಯು ಇದೆ ಎಂದು ತಿಳಿಸಿದೆ.

ಆದರೆ, ಪಾಕಿಸ್ತಾನ ಈ ಆರೋಪವನ್ನು ತಳ್ಳಿಹಾಕಿದ್ದು, ನಾವು ಕೇವಲ ಮಿಲಿಟರಿ ಮತ್ತು ಉಗ್ರರ ಮೂಲಸೌಕರ್ಯಗಳನ್ನು ಮಾತ್ರ ಗುರಿಯಾಗಿಸಿಕೊಂಡಿದ್ದೇವೆ ಎಂದು ಹೇಳಿದೆ.

ಭಾರತ ಖಂಡನೆ
ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯನ್ನು ಭಾರತ ಖಂಡಿಸಿದೆ. ಇದು ಅನಾಗರಿಕ ಹಾಗೂ ಹೇಡಿತನದ ಕೃತ್ಯ ಎಂದು ಕಿಡಿಕಾರಿದೆ. ಆಸ್ಪತ್ರೆಯ ಮೇಲಿನ ದಾಳಿಯು ಪಾಕಿಸ್ತಾನದ ಘೋರ ಆಕ್ರಮಣಕಾರಿ ಕೃತ್ಯ. ಅಫ್ಘಾನಿಸ್ತಾನದ ಸಾರ್ವಭೌಮತ್ವದ ಮೇಲಿನ ದಾಳಿ. ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗೆ ಬೆದರಿಕೆ ಎಂದು ವಿದೇಶಾಂಗ ಸಚಿವಾಲಯ ಆಕ್ರೋಶ ಹೊರಹಾಕಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

2 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

2 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

2 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

3 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

3 hours ago

ಚಾಮರಾಜನಗರದಲ್ಲಿ ದಿಢೀರ್‌ ಆಲಿಕಲ್ಲು ಸಹಿತ ಮಳೆ ಅಬ್ಬರ

ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…

3 hours ago