ಕಾಬೂಲ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 400 ಮಂದಿ ಮೃತಪಟ್ಟಿದ್ದಾರೆ. ಜತೆಗೆ 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಸೋಮವಾರ ರಾತ್ರಿಯ ವೇಳೆ ಕಾಬೂಲ್‌ನಲ್ಲಿರುವ ಓಮಿದ್ ಪುನರ್ವಸತಿ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ದಾಳಿ ನಡೆಸಿದೆ ಎಂದು ಅಫ್ಘಾನ್ ಸರ್ಕಾರ ಮಾಹಿತಿ ನೀಡಿದೆ.
ಆಸ್ಪತ್ರೆ ಬಹುಭಾಗ ಧ್ವಂಸಗೊಂಡಿದ್ದು, ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ಸಾಗಿವೆ. ಸಾವು-ನೋವಿನ ಸಂಖ್ಯೆ ಏರಿಕೆ ಆಗುವ ಸಾಧ್ಯತೆಯು ಇದೆ ಎಂದು ತಿಳಿಸಿದೆ.
ಆದರೆ, ಪಾಕಿಸ್ತಾನ ಈ ಆರೋಪವನ್ನು ತಳ್ಳಿಹಾಕಿದ್ದು, ನಾವು ಕೇವಲ ಮಿಲಿಟರಿ ಮತ್ತು ಉಗ್ರರ ಮೂಲಸೌಕರ್ಯಗಳನ್ನು ಮಾತ್ರ ಗುರಿಯಾಗಿಸಿಕೊಂಡಿದ್ದೇವೆ ಎಂದು ಹೇಳಿದೆ.
ಭಾರತ ಖಂಡನೆ
ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯನ್ನು ಭಾರತ ಖಂಡಿಸಿದೆ. ಇದು ಅನಾಗರಿಕ ಹಾಗೂ ಹೇಡಿತನದ ಕೃತ್ಯ ಎಂದು ಕಿಡಿಕಾರಿದೆ. ಆಸ್ಪತ್ರೆಯ ಮೇಲಿನ ದಾಳಿಯು ಪಾಕಿಸ್ತಾನದ ಘೋರ ಆಕ್ರಮಣಕಾರಿ ಕೃತ್ಯ. ಅಫ್ಘಾನಿಸ್ತಾನದ ಸಾರ್ವಭೌಮತ್ವದ ಮೇಲಿನ ದಾಳಿ. ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗೆ ಬೆದರಿಕೆ ಎಂದು ವಿದೇಶಾಂಗ ಸಚಿವಾಲಯ ಆಕ್ರೋಶ ಹೊರಹಾಕಿದೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…