ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್ ಎಕ್ಸ್ ಖಾತೆಯನ್ನು ಭಾರತ ಸರ್ಕಾರ ನಿರ್ಬಂಧಿಸಿದೆ.
ನಿನ್ನೆ ತಾನೇ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದಕ್ಕಾಗಿ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ಭಾರತ ನಿಷೇಧಿಸಿತ್ತು. ಈಗ ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್ ಎಕ್ಸ್ ಖಾತೆಯನ್ನು ನಿರ್ಬಂಧಿಸಿದೆ.
ಇದನ್ನೂ ಓದಿ:- ಪಾಕಿಸ್ತಾನ ವಿರುದ್ಧ ಯುದ್ಧ ಆಗಲೇಬೇಕು: ಸಚಿವ ಎಂ.ಬಿ.ಪಾಟೀಲ್
ಪಹಲ್ಗಾಮ್ ದುರಂತದಿಂದ ರೊಚ್ಚಿಗೆದ್ದಿರುವ ಭಾರತ ಸರ್ಕಾರವು ಪಾಕ್ ವಿರುದ್ಧ ದಿನದಿಂದ ದಿನಕ್ಕೆ ಒಂದಲ್ಲಾ ಒಂದು ಕಠಿಣ ಕ್ರಮಗಳನ್ನು ಜಾರಿಗೆ ತರುತ್ತಿದೆ.
ಈ ಮೂಲಕ ಭಾರತವು ಪಾಕ್‌ಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದು, ಇನ್ನೂ ಹಲವು ಕಠಿಣ ನಿರ್ಬಂಧ ಹೇರುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.





