ಇಸ್ಲಾಮಾಬಾದ್: ಜೈಲಿನಲ್ಲಿರುವ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಲಿಸ್ತಾನ ತಹ್ರಿಕ್ ಎ ಇನ್ಸಾಫ್ ಪಕ್ಷ ನಿಷೇಧಿಸಲು ಪಾಕಿಸ್ತಾನದ ಶೆಹಬಾಜ್ ಷರೀಫ್ ನೇತೃತ್ವದ ಸರ್ಕಾರ ನಿರ್ಧರಿಸಿದೆ ಎಂದು ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಪಾಕ್ ಸಚಿವ ಅತ್ತಾವುಲ್ಲಾ ತರಾತ್, ಸರ್ಕಾರ ಪಿಟಿಐ ಪಕ್ಷದ ಮೇಲೆ ನಿಷೇಧ ಹೇರಲು ನಿರ್ಧರಿಸಿದೆ. ಪಿಟಿಐ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದೆ. ಈ ಪ್ರಕರಣವನ್ನು ಪಾಕ್ ಸುಪ್ರೀಂಕೋರ್ಟ್‌ಗೆ ವಹಿಸಲಾಗಿದೆ ಎಂದು ತಿಳಿಸಿದೆ.
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್, 1996ರಲ್ಲಿ ಪಾಕಿಸ್ತಾನ್ ತೆಹ್ರಿಕ್ ಎ ಇನ್ಸಾಫ್ ಪಕ್ಷವನ್ನು ಸ್ಥಾಪಿಸಿದ್ದರು. ಸಾಕಷ್ಟು ರಾಜಕೀಯ ಸಂಘರ್ಷಗಳ ಬಳಿಕ 2018 ರಲ್ಲಿ ಅವರ ಪಕ್ಷ ಮೊದಲ ಬಾರಿಗೆ ಅಧಿಕಾರಕ್ಕೆ ಬಂದು, ಇಮ್ರಾನ್ ಖಾನ್ ಪ್ರಧಾನಿಯಾಗುವುದರಲ್ಲಿ ಯಶಸ್ವಿಯಾಗಿದ್ದರು.
ಇದೀಗ ಪಿಟಿಐ ಪಕ್ಷ ವಿದೇಶಿ ಮೂಲಗಳಿಂದ ಅಕ್ರಮವಾಗಿ ಹಣ ಸ್ವೀಕರಿಸುವ ಬಗ್ಗೆ ಪುರಾವೆ ಸಿಕ್ಕಿವೆ. ಅದಲ್ಲದೇ ಆ ಹಣವನ್ನು ಬಳಸಿಕೊಂಡು ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರುವುದು ಬಟಾ ಬಯಲಾಗಿದೆ ಎನ್ನಲಾಗಿದ್ದು, ವಿದೇಶಿ ನಿಧಿ ಪ್ರಕರಣ, ಮೇ.9ರ ಗಲಭೆಗಳು, ಸೈಫರ್ ಎಪಿಸೋಡ್ ಹಲವು ಪ್ರಕರಣಗಳ ಹಿನ್ನೆಯಲ್ಲಿ ದೇಶದ ದೃಷ್ಟಿಯಿಂದ, ಪಿಟಿಐ ಅನ್ನು ನಿಷೇಧಿಸಲು ಮುಂದಾಗಿದ್ದು, ಹೀಗಾಗಿ ಇಮ್ರಾನ್ ಖಾನ್ ಪಕ್ಷವನ್ನು ಬ್ಯಾನ್ ಮಾಡಲಾಗುತ್ತದೆ ಎಂದು ಬಲ್ಲ ಮೂಲಗಳು ಹೇಳಿದೆ.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…