Mysore
18
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಅಂತರಾಷ್ಟ್ರೀಯ ಮಟ್ಟದಲ್ಲಿ ಪಾಕ್‌ಗೆ ಮತ್ತೆ ಮುಖಭಂಗ: ಭಯೋತ್ಪಾದಕ ಪಟ್ಟಿಗೆ ಸೇರಿದ ಟಿಆರ್‌ಎಫ್‌

ನವದೆಹಲಿ: ಏಪ್ರಿಲ್.‌22ರ ಪಹಲ್ಗಾಮ್‌ ಉಗ್ರ ದಾಳಿ ಎಸಗಿದ ಪಾಕ್‌ ಮೂಲ್‌ ದಿ ರೆಸಿಸ್ಟನ್ಸ್‌ ಫ್ರಂಟ್‌ ಅನ್ನು ಅಮೇರಿಕಾದ ವಿದೇಶಾಂಗ ಇಲಾಖೆ ಭಯೋತ್ಪಾದಕ ಸಂಘಟನೆ ಪಟ್ಟಿಗೆ ಸೇರಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್.‌22ರಂದು ನಡೆದ ಪಹಲ್ಗಾಮ್ನ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರ ಪ್ರಾಣ ಬಲಿ ಪಡೆದ ಘಟನೆಯ ಹೊಣೆಗಾರಿಕೆಯನ್ನು ಈ ಸಂಘಟನೆ ವಹಿಸಿದೆ ಎಂದು ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಂದು ವಿದೇಶಾಂಗ ಇಲಾಖೆಯ ದಿ ರೆಸಿಸ್ಟೆನ್ಸ್‌ ಫ್ರಂಟ್‌ ಅನ್ನು ಗೊತ್ತುಪಡಿಸಿದ ವಿದೇಶಿ ಭಯೋತ್ಪಾದಕ ಸಂಘಟನೆ ಮತ್ತು ವಿಶೇಷವಾಗಿ ಗೊತ್ತುಪಡಿಸಿದ ಜಾಗತಿಕ ಭಯೋತ್ಪಾದಕ ಎಂದು ಹೆಸರಿಡುತ್ತದೆ.

ಲಷ್ಕರ್‌ ಎ ತೊಯ್ಬಾ ಸಂಸ್ಥೆಯ ಭಾಗವಾಗಿರುವ ಟಿಆರ್‌ಎಫ್‌ ಪಹಲ್ಗಾಮ್‌ ದಾಳಿಯ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. 2008ರ ಮುಂಬೈ ದಾಳಿಯ ನಂತರ ಭಾರತದಲ್ಲಿ ನಾಗರಿಕರ ಮೇಲೆ ನಡೆದ ಅತ್ಯಂತ ಮಾರಕ ದಾಳಿ ಇದಾಗಿದೆ. ಭಾರತೀಯ ಭದ್ರತಾ ಪಡೆಗಳ ವಿರುದ್ಧದ ಹಲವಾರು ದಾಳಿಯ ಹೊಣೆಯನ್ನು ಟಿಆರ್‌ಎಫ್‌ ಹೊತ್ತುಕೊಂಡಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಈ ಕ್ರಮವು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಡಳಿತದ ಭಯೋತ್ಪಾದನೆಯನ್ನು ಎದುರಿಸುವ ಬದ್ಧತೆಯನ್ನು ಪ್ರದರ್ಶಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Tags:
error: Content is protected !!