ನವದೆಹಲಿ: ಏಪ್ರಿಲ್.22ರ ಪಹಲ್ಗಾಮ್ ಉಗ್ರ ದಾಳಿ ಎಸಗಿದ ಪಾಕ್ ಮೂಲ್ ದಿ ರೆಸಿಸ್ಟನ್ಸ್ ಫ್ರಂಟ್ ಅನ್ನು ಅಮೇರಿಕಾದ ವಿದೇಶಾಂಗ ಇಲಾಖೆ ಭಯೋತ್ಪಾದಕ ಸಂಘಟನೆ ಪಟ್ಟಿಗೆ ಸೇರಿಸಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್.22ರಂದು ನಡೆದ ಪಹಲ್ಗಾಮ್ನ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರ ಪ್ರಾಣ ಬಲಿ ಪಡೆದ ಘಟನೆಯ ಹೊಣೆಗಾರಿಕೆಯನ್ನು ಈ ಸಂಘಟನೆ ವಹಿಸಿದೆ ಎಂದು ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇಂದು ವಿದೇಶಾಂಗ ಇಲಾಖೆಯ ದಿ ರೆಸಿಸ್ಟೆನ್ಸ್ ಫ್ರಂಟ್ ಅನ್ನು ಗೊತ್ತುಪಡಿಸಿದ ವಿದೇಶಿ ಭಯೋತ್ಪಾದಕ ಸಂಘಟನೆ ಮತ್ತು ವಿಶೇಷವಾಗಿ ಗೊತ್ತುಪಡಿಸಿದ ಜಾಗತಿಕ ಭಯೋತ್ಪಾದಕ ಎಂದು ಹೆಸರಿಡುತ್ತದೆ.
ಲಷ್ಕರ್ ಎ ತೊಯ್ಬಾ ಸಂಸ್ಥೆಯ ಭಾಗವಾಗಿರುವ ಟಿಆರ್‌ಎಫ್ ಪಹಲ್ಗಾಮ್ ದಾಳಿಯ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. 2008ರ ಮುಂಬೈ ದಾಳಿಯ ನಂತರ ಭಾರತದಲ್ಲಿ ನಾಗರಿಕರ ಮೇಲೆ ನಡೆದ ಅತ್ಯಂತ ಮಾರಕ ದಾಳಿ ಇದಾಗಿದೆ. ಭಾರತೀಯ ಭದ್ರತಾ ಪಡೆಗಳ ವಿರುದ್ಧದ ಹಲವಾರು ದಾಳಿಯ ಹೊಣೆಯನ್ನು ಟಿಆರ್‌ಎಫ್ ಹೊತ್ತುಕೊಂಡಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
ಈ ಕ್ರಮವು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ಭಯೋತ್ಪಾದನೆಯನ್ನು ಎದುರಿಸುವ ಬದ್ಧತೆಯನ್ನು ಪ್ರದರ್ಶಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…