Mysore
27
broken clouds
Light
Dark

ಪಾಕ್ ಮಸೀದಿಯಲ್ಲಿ ಬಾಂಬ್ ಸ್ಛೋಟ : 17 ಸಾವು

ಪೇಶಾವರ: ಪಾಕಿಸ್ತಾನದ ವಾಯುವ್ಯ ನಗರವಾದ ಪೇಶಾವರದ ಪೊಲೀಸ್ ಲೈನ್ಸ್ ಪ್ರದೇಶದ ಬಳಿ ಮಸೀದಿಯೊಂದರಲ್ಲಿ ಮಧ್ಯಾಹ್ನ 1.40ರ ಸುಮಾರಿಗೆ ಪ್ರಾರ್ಥನೆಯ ವೇಳೆ ಆತ್ಮಹತ್ಯಾ ದಾಳಿ ನಡೆದು, ದುರ್ಘಟನೆಯಲ್ಲಿ 17 ಜನ ಸಾವಿಗೀಡಾಗಿದ್ದು, 95 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಛೋಟದಲ್ಲಿ ಪೊಲೀಸರು, ಆರೋಗ್ಯ ಅಧಿಕಾರಿಗಳು, ಭದ್ರತಾ ಸಿಬ್ಬಂದಿಗಳಿಗೆ ಹೆಚ್ಚು ಹಾನಿಯಾಗಿದೆ ಎಂದು ಮೂಲಗಳು ಹೇಳಿವೆ.
ಭೀಕರ ಸ್ಛೋಟದಿಂದ ಕಟ್ಟಡದ ಒಂದು ಭಾಗ ಕುಸಿದು ಬಿದ್ದಿದ್ದು, ಅದರ ಅಡಿಯಲ್ಲಿ ಹಲವಾರು ಮಂದಿ ಸಿಲುಕಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಸ್ಛೋಟದಲ್ಲಿ 17 ಜನರು ಸಾವಿಗೀಡಾಗಿದ್ದು, 95 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಹೆಚ್ಚಾಗಿ ಪೊಲೀಸರಿದ್ದರು ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ.
ಗಾಯಾಳುಗಳನ್ನು ಪೇಶಾವರದ ಲೇಡಿ ರೀಡಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ಗಯಗೊಂಡವರಲ್ಲಿ 13 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಪೇಶಾವರದ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಸಂತ್ರಸ್ತರಿಗಾಗಿ ರಕ್ತದಾನ ಮಾಡುವಂತೆ ಆಸ್ಪತ್ರೆ ನಾಗರಿಕರಲ್ಲಿ ಮನವಿ ಮಾಡಿದೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ