ದೇಶ- ವಿದೇಶ

ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌: ವಿಡಿಯೋ ವೈರಲ್‌

ನವದೆಹಲಿ: ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಷರೀಫ್‌ ಮೇ.10ರ ಮುಂಜಾನೆ ಆಪರೇಷನ್‌ ಸಿಂಧೂರ್‌ನ ಭಾಗವಾಗಿ ತಮ್ಮ ಪ್ರಮುಖ ವಾಯುನೆಲೆಗಳ ಮೇಲೆ ಭಾರತ ನಡೆಸಿದ ನಿಖರ ದಾಳಿಯನ್ನು ದೃಢಪಡಿಸಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿದೆ.

ಇದು ಇತ್ತೀಚಿನ ನಾಲ್ಕು ದಿನಗಳ ಉಲ್ಬಣದ ಬಗ್ಗೆ ಅವರು ಮಾತನಾಡುವ ಮೊದಲ ವಿಡಿಯೋ ಆಗಿದೆ. ಶುಕ್ರವಾರ ಪಾಕಿಸ್ತಾನ ಸ್ಮಾರಕದಲ್ಲಿ ನಡೆದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಷರೀಫ್‌, ಭಾರತೀಯ ಕಾರ್ಯಾಚರಣೆ ಪ್ರಾರಂಭವಾದ ಕೆಲವೇ ಕ್ಷಣಗಳಲ್ಲಿ ಸೇನಾ ಮುಖ್ಯಸ್ಥ ಜನರಲ್‌ ಅಸಿಮ್‌ ಮುನೀರ್‌ ಅವರು ತಮ್ಮನ್ನು ಬೆಳಗಿನ ಜಾವ 2.30ಕ್ಕೆ ಎಬ್ಬಿಸಿದರು ಎಂದು ಹೇಳಿದರು.

ಮುನೀರ್‌ ಅವರು ಬೆಳಗಿನ ಜಾವ 2.30ಕ್ಕೆ ನನಗೆ ವೈಯಕ್ತಿಕವಾಗಿ ಕರೆ ಮಾಡಿ ದಾಳಿಯ ಬಗ್ಗೆ ಮಾಹಿತಿ ನೀಡಿದರು. ಇದು ತೀವ್ರ ಕಳವಳದ ಕ್ಷಣವಾಗಿತ್ತು ಎಂದು ಷರೀಫ್‌ ಇಸ್ಲಾಮಾಬಾದ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಬಿಜೆಪಿಯ ರಾಷ್ಟ್ರೀಯ ಐಟಿ ವಿಭಾಗದ ಮುಖ್ಯಸ್ಥ ಅಮಿತ್‌ ಮಾಳವೀಯ ಎಕ್ಸ್‌ನಲ್ಲಿ ವಿಡಿಯೋವನ್ನು ಹಂಚಿಕೊಂಡು, ಈ ಘಟನೆಯನ್ನು ಆಪರೇಷನ್‌ ಸಿಂಧೂರ್‌ನ ಧೈರ್ಯ ಮತ್ತು ದಕ್ಷತೆಗೆ ಸಾಕ್ಷಿ ಎಂದು ಬಣ್ಣಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

9 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

9 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

11 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

13 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

13 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

14 hours ago