Mysore
29
broken clouds
Light
Dark

ಪ್ರಧಾನಿ ಮೋದಿಗೆ ಶುಭಾಶಯ ಕೋರಿದ ಪಾಕ್‌ ಪ್ರಧಾನಿ ಶೆಹಬಾಜ್‌

ನವದೆಹಲಿ: ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನಿನ್ನೆ(ಜೂ.9) ಪದಗ್ರಹಣ ಸ್ವೀಕರಿಸಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನಿ ಪ್ರಧಾನಿ ಶೆಹಬಾಜ್‌ ಷರೀಬ್‌ ಅವರು ಶುಭಾಶಯಗಳನ್ನು ಕೋರಿದ್ದಾರೆ.

ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.

ನಿನ್ನೆ(ಜೂ.9) ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ನರೇಂದ್ರ ಮೋದಿ ಹಾಗೂ ಅವರ ಸಂಪುಟದ ಸಚಿವರು ಪದಗ್ರಹಣ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬಾಂಗ್ಲಾದೇಶ, ನೇಪಾಳ, ಭೂತಾನ್‌, ಶ್ರೀಲಂಕಾ ಹಾಗೂ ಮಾಲ್ಡೀವ್ಸ್‌ನ ನಾಯಕರಿಗೆ ಆಹ್ವಾನ ನೀಡಲಾಗಿತ್ತು. ಆಹ್ವಾನದಂತೆ ಈ ಎಲ್ಲಾ ರಾಷ್ಟ್ರದ ನಾಯಕರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಆದರೆ ನೆರೆಯ ರಾಷ್ಟ್ರ ಪಾಕಿಸ್ತಾನಕ್ಕೆ ಆಹ್ವಾನ ನೀಡಿರಲಿಲ್ಲ.