ಟೆಹರಾನ್: ಕಾಶ್ಮೀರ, ಭಯೋತ್ಪಾದನೆ, ನೀರು ಹಂಚಿಕೆ ಮತ್ತು ವ್ಯಾಪಾರ ಸೇರಿದಂತೆ ಎರಡು ನೆರೆಯ ರಾಷ್ಟ್ರಗಳ ನಡುವಿನ ಎಲ್ಲಾ ಬಾಕಿ ಇರುವ ಸಮಸ್ಯೆಗಳನ್ನು ಪರಿಹರಿಸಲು ಭಾರತದೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ಸಿದ್ಧವಿದೆ ಎಂಬ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಟರ್ಕಿಯ ನಂತರ ಷರೀಫ್ ಈಗ ಎರಡು ದಿನಗಳ ಭೇಟಿಗಾಗಿ ಇರಾನ್‍ಗೆ ಆಗಮಿಸಿರುವ ವೇಳೆ ಟೆಹರಾನ್‍ನಲ್ಲಿ ಮಾತನಾಡಿದ್ದಾರೆ. ಕಾಶ್ಮೀರ ಸಮಸ್ಯೆ, ಭಯೋತ್ಪಾದನೆ, ನೀರು ಹಂಚಿಕೆ ಮತ್ತು ವ್ಯಾಪಾರ ಸೇರಿದಂತೆ ಎರಡು ನೆರೆಯ ರಾಷ್ಟ್ರಗಳ ನಡುವಿನ ಎಲ್ಲಾ ಬಾಕಿ ಇರುವ ಸಮಸ್ಯೆಗಳನ್ನು ಮಾತುಕತೆ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಕಾಶ್ಮೀರ ಸಮಸ್ಯೆ ಮತ್ತು ನೀರಿನ ಸಮಸ್ಯೆ ಸೇರಿದಂತೆ ಎಲ್ಲಾ ವಿವಾದಗಳನ್ನು ಮಾತುಕತೆಗಳ ಮೂಲಕ ಪರಿಹರಿಸಲು ನಾವು ಬಯಸುತ್ತೇವೆ. ವ್ಯಾಪಾರ ಮತ್ತು ಭಯೋತ್ಪಾದನೆ ನಿಗ್ರಹದ ಬಗ್ಗೆ ನಮ ನೆರೆಹೊರೆಯವರೊಂದಿಗೆ ಮಾತನಾಡಲು ಸಹ ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.
ಆಪರೇಷನ್ ಸಿಂಧೂರದ ಮೂಲಕ ನಡೆಸಿದ ಮಿಲಿಟರಿ ದಾಳಿ ಬಳಿಕ ಪಾಕಿಸ್ತಾನ ಬೆಚ್ಚಿ ಬಿದ್ದಿದೆ. ಪ್ರಧಾನಿ ಮೋದಿ ಪಾಕಿಸ್ತಾನದೊಂದಿಗಿನ ಯಾವುದೇ ಮಾತುಕತೆ ಸಾಧ್ಯವಿಲ್ಲ ಎಂದು ಹೇಳಿದ್ದರು. ಪಾಕ್ ಆಕ್ರಮಿತ ಕಾಶೀರ ನಮಗೆ ಮರಳಿಸುವವರೆಗೂ ನಾವು ಯಾವುದೇ ರೀತಿಯಲ್ಲಿಯೂ ಸಂಧಾನಕ್ಕೆ ಬರುವುದಿಲ್ಲ ಎಂದು ಸರ್ಕಾರ ಹೇಳಿತ್ತು.
ಭಯೋತ್ಪಾದನೆ ಮತ್ತು ಮಾತುಕತೆ ಒಂದೇ ಸಮಯದಲ್ಲಿ ನಡೆಯಲು ಸಾಧ್ಯವಿಲ್ಲ. ಭಯೋತ್ಪಾದನೆ ಮತ್ತು ವ್ಯಾಪಾರ ನಡೆಯಲು ಸಾಧ್ಯವಿಲ್ಲ. ರಕ್ತ ಮತ್ತು ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ. ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆ ನಡೆದರೆ, ಅದು ಭಯೋತ್ಪಾದನೆ ಮತ್ತು ಪಿಒಕೆ ಬಗ್ಗೆ ಮಾತ್ರ ಎಂದು ನಾನು ಅಂತರರಾಷ್ಟ್ರೀಯ ಸಮುದಾಯಕ್ಕೆ ಹೇಳಲು ಬಯಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದರು.
ಇದೀಗ ಪಾಕಿಸ್ತಾನ ಪ್ರಧಾನಿ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುವಾಗ ಭಾರತದ ಜೊತೆಗೆ ಮಾತುಕತೆಗೆ ತಯಾರಿದ್ದೇವೆ ಎಂದು ಹೇಳಿದ್ದು, ನಾವು ಶಾಂತಿಯನ್ನು ಬಯಸುತ್ತೇವೆ ಎಂದಿದ್ದಾರೆ
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…