ದೇಶ- ವಿದೇಶ

ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು: ಬಿಎಸ್‌ಎಫ್‌ ಯೋಧನನ್ನು ಬಿಟ್ಟು ಕಳಿಸಿದ ಪಾಕಿಸ್ತಾನ

ನವದೆಹಲಿ: ಪಾಕಿಸ್ತಾನವು ವಶಕ್ಕೆ ಪಡೆದಿದ್ದ ಬಿಎಸ್‌ಎಫ್‌ ಕಾನ್ಸ್‌ಸ್ಟೇಬಲ್‌ ಪೂರ್ಣಮ್‌ ಕುಮಾರ್‌ ಅವರನ್ನು ಇಂದು ಬಿಡುಗಡೆ ಮಾಡಿದೆ.

ಏಪ್ರಿಲ್.‌23ರಿಂದ ಪಾಕಿಸ್ತಾನದ ವಶದಲ್ಲಿದ್ದ ಬಿಎಸ್‌ಎಫ್‌ ಜವಾನ್‌ ಪೂರ್ಣಮ್‌ ಕುಮಾರ್‌ ಶಾ ಅವರನ್ನು ಇಂದು ಬೆಳಿಗ್ಗೆ 10.30ರ ಸುಮಾರಿಗೆ ಅಮೃತಸರದ ಅಟ್ಟಾರಿಯ ಜಂಟಿ ಚೆಕ್‌ಪೋಸ್ಟ್‌ನಲ್ಲಿ ಅಧಿಕೃತವಾಗಿ ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.

ಇದನ್ನೂ ಓದಿ:- ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್.ಗವಾಯಿ ಪ್ರಮಾಣ ವಚನ ಸ್ವೀಕಾರ

ಏಪ್ರಿಲ್.‌23ರಂದು ಪಂಜಾಬ್‌ನ್ ಫಿರೋಜ್‌ಪುರ ಜಿಲ್ಲೆಯ ಮಾಮ್‌ಡೋಟ್‌ ಸೆಕ್ಟರ್‌ನಲ್ಲಿ ಬಿಎಸ್‌ಎಫ್‌ನ 182ನೇ ಬೆಟಾಲಿಯನ್‌ ಕಾನ್ಸ್‌ಸ್ಟೇಬಲ್‌ ಪೂರ್ಣಮ್‌ ಕುಮಾರ್‌ ಶಾ ಅವರು ಗಡಿ ಸಮೀಪದ ರೈತರಿಗೆ ರಕ್ಷಣೆ ನೀಡುವ ಕಿಸಾನ್‌ ಗಾರ್ಡ್‌ ಕರ್ತವ್ಯದಲ್ಲಿದ್ದಾಗ ತಪ್ಪಾಗಿ ಪಾಕಿಸ್ತಾನದ ಗಡಿಗೆ ದಾಟಿದರು.

ಈ ವೇಳೆ ಪಾಕ್‌ ರೇಂಜರ್‌ಗಳು ಅವರನ್ನು ಬಂಧಿಸಿದ್ದರು. ನಿನ್ನೆ ತಾನೇ ಅಧಂಪುರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಕ್‌ಗೆ ಖಡಕ್‌ ಎಚ್ಚರಿಕೆ ಕೊಟ್ಟ ಬೆನ್ನಲ್ಲೇ ಇಂದು ಯೋಧನನ್ನು ಬಿಡುಗಡೆಗೊಳಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

25 mins ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

1 hour ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

1 hour ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

2 hours ago

ಕೆ.ಆರ್.ಆಸ್ಪತ್ರೆಯಲ್ಲಿ 100 ಹಾಸಿಗೆಯುಳ್ಳ ICU ಘಟಕ ಸ್ಥಾಪಿಸಿ : ಎಂಎಲ್‌ಸಿ ಕೆ.ಶಿವಕುಮಾರ್ ಮನವಿ

ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…

3 hours ago

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌…

4 hours ago