Indus Waters Treaty
ನವದೆಹಲಿ: ಸಿಂಧೂ ನದಿ ಜಲ ಒಪ್ಪಂದದ ಅಮಾನತ್ತನ್ನು ಮರುಪರಿಶೀಲಿಸಿ ಎಂದು ಭಾರತಕ್ಕೆ ಪಾಕಿಸ್ತಾನ ಮನವಿ ಮಾಡಿಕೊಂಡಿದೆ.
ಪಹಲ್ಗಾಮ್ ದಾಳಿಯ ನಂತರ ಭಾರತ ಪಾಕಿಸ್ತಾನದೊಂದಿಗಿನ ಸಿಂಧೂ ನದಿ ಜಲ ಒಪ್ಪಂದವನ್ನು ರದ್ದುಗೊಳಿಸಿತ್ತು. ಇದರಿಂದ ಪಾಕಿಸ್ತಾನದಲ್ಲಿ ನೀರಿನ ಬಿಕ್ಕಟ್ಟು ತಲೆದೋರಿದೆ. ಕದನ ವಿರಾಮ ಘೋಷಣೆಯಾದರೂ ಪಾಕಿಸ್ತಾನ ಭಯೋತ್ಪಾದನೆಗೆ ನೀಡುವ ಬೆಂಬಲವನ್ನು ಪೂರ್ತಿಯಾಗಿ ನಿಲ್ಲಿಸುವವರೆಗೂ ಸಿಂಧೂ ಜಲ ಒಪ್ಪಂದ ರದ್ದಾಗಿರುತ್ತದೆ ಎಂದು ಭಾರತ ಖಚಿತಪಡಿಸಿದ್ದಕ್ಕೆ ಮೊದಲು ಪಾಕಿಸ್ತಾನ ಅಹಂಕಾರದ ಮಾತುಗಳನ್ನಾಡಿತ್ತು.
ಭಾರತ ಸಿಂಧೂ ಜಲ ಒಪ್ಪಂದ ಅಮಾನತ್ತನ್ನು ಕೈಬಿಡದಿದ್ದರೆ ಕದನವಿರಾಮಕ್ಕೆ ಯಾವುದೇ ಅರ್ಥವಿರುವುದಿಲ್ಲ. ನಮಗೆ ನೀರು ಬಿಡದಿದ್ದರೆ ಅದನ್ನು ಹೇಗೆ ಪಡೆಯಬೇಕೆಂಬುದು ನಮಗೆ ಗೊತ್ತಿದೆ ಎಂದು ಪಾಕ್ ಹೇಳಿಕೆ ನೀಡಿತ್ತು. ಅದಕ್ಕೂ ಭಾರತ ಜಗ್ಗದಿದ್ದಾಗ ಇದೀಗ ಮಾತುಕತೆಯ ಮೂಲಕ ಭಾರತದ ಮನವೊಲಿಸಲು ಮುಂದಾಗಿದೆ.
ಪಾಕಿಸ್ತಾನದ ಜಲಸಂಪನ್ಮೂಲ ಕಾರ್ಯದರ್ಶಿ ಸೈಯದ್ ಅಲಿ ಮುರ್ತಾಜಾ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಕೇಂದ್ರ ಸಚಿವ ಸಂಪುಟದ ನಿರ್ಧಾರದ ಬಗ್ಗೆ ಭಾರತವು ಔಪಚಾರಿಕವಾಗಿ ತಿಳಿಸಿದ್ದಕ್ಕೆ ಪ್ರತಿಕ್ರಿಯಿಸಿದ್ದಾರೆ. ಅವರು ತಮ್ಮ ಸರ್ಕಾರದ ಪರವಾಗಿ ಭಾರತ ಆಕ್ಷೇಪಿಸುವ ನಿರ್ದಿಷ್ಟ ಷರತ್ತುಗಳನ್ನು ಚರ್ಚಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿ ಪಾಕಿಸ್ತಾನ ಭಾರತಕ್ಕೆ ಪತ್ರ ಬರೆದಿದೆ ಎಂದು ವರದಿಯಾಗಿದೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…