ಇಸ್ಲಾಮಾಬಾದ್: ಒಂಭತ್ತು ದೇಶಗಳ ಒಕ್ಕೂಟವಾದ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ ಇಂದು ಮತ್ತು ನಾಳೆ ಇಸ್ಲಾಮಾಬಾದ್‌ನಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದಶಕಗಳ ಬಳಿಕ ಮೊದಲ ಬಾರಿಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಪಾಕ್ ಪ್ರಧಾನಿ ಶಹಬಾಜ್ ಷರೀಫ್ ಅಥವಾ ಅಲ್ಲಿನ ವಿದೇಶಾಂಗ ಸಚಿವರೊಂದಿಗೆ ಯಾವುದೇ ಕಾರಣಕ್ಕೂ ದ್ವಿಪಕ್ಷೀಯ ಮಾತುಕತೆ ನಡೆಸುವುದಿಲ್ಲ. ಆದರೆ ಪ್ರಧಾನಿ ಷರೀಫ್ ಅವರು ಹಮ್ಮಿಕೊಂಡ ಔತಣಕೂಟದಲ್ಲಿ ಭಾಗವಹಿಸಲಿದ್ದೇನೆ ಎಂದು ಹೇಳಿದ್ದಾರೆ.
ಶೃಂಗಸಭೆಯ ಸಂದರ್ಭದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ವಿವಾದಗಳು ದ್ವೀಪಕ್ಷೀಯವಾಗಿರುವ ಕಾರಣ ಈ ಬಗ್ಗೆ ಪಾಕ್‌ನೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಹೇಳಲಾಗಿದೆ. ಆದರೆ, ಭಾರತ, ರಷ್ಯಾ, ಪಾಕಿಸ್ತಾನ, ಚೀನಾ, ಇರಾನ್ ಹಾಗೂ ಮಧ್ಯ ಏಷ್ಯಾದ 4 ದೇಶಗಳು ಸದಸ್ಯರಾಗಿರುವ ಕಾರಣ ಈ ಒಕ್ಕೂಟಕ್ಕೆ ಗೌರವ ಸಲ್ಲಿಸುವ ಉದ್ದೇಶದಿಂದ ಮಾತ್ರ ಪಾಕ್‌ಗೆ ತೆರಳಿ ಭಾಷಣ ಮಾಡಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…