ದೇಶ- ವಿದೇಶ

ದಶಕಗಳ ಬಳಿಕ ಮೊದಲ ಬಾರಿಗೆ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಪಾಕ್‌ಗೆ ಭೇಟಿ

ಇಸ್ಲಾಮಾಬಾದ್‌: ಒಂಭತ್ತು ದೇಶಗಳ ಒಕ್ಕೂಟವಾದ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ ಇಂದು ಮತ್ತು ನಾಳೆ ಇಸ್ಲಾಮಾಬಾದ್‌ನಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದಶಕಗಳ ಬಳಿಕ ಮೊದಲ ಬಾರಿಗೆ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಪಾಕ್ ಪ್ರಧಾನಿ ಶಹಬಾಜ್‌ ಷರೀಫ್‌ ಅಥವಾ ಅಲ್ಲಿನ ವಿದೇಶಾಂಗ ಸಚಿವರೊಂದಿಗೆ ಯಾವುದೇ ಕಾರಣಕ್ಕೂ ದ್ವಿಪಕ್ಷೀಯ ಮಾತುಕತೆ ನಡೆಸುವುದಿಲ್ಲ. ಆದರೆ ಪ್ರಧಾನಿ ಷರೀಫ್‌ ಅವರು ಹಮ್ಮಿಕೊಂಡ ಔತಣಕೂಟದಲ್ಲಿ ಭಾಗವಹಿಸಲಿದ್ದೇನೆ ಎಂದು ಹೇಳಿದ್ದಾರೆ. ‌

ಶೃಂಗಸಭೆಯ ಸಂದರ್ಭದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ವಿವಾದಗಳು ದ್ವೀಪಕ್ಷೀಯವಾಗಿರುವ ಕಾರಣ ಈ ಬಗ್ಗೆ ಪಾಕ್‌ನೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಹೇಳಲಾಗಿದೆ. ಆದರೆ, ಭಾರತ, ರಷ್ಯಾ, ಪಾಕಿಸ್ತಾನ, ಚೀನಾ, ಇರಾನ್‌ ಹಾಗೂ ಮಧ್ಯ ಏಷ್ಯಾದ 4 ದೇಶಗಳು ಸದಸ್ಯರಾಗಿರುವ ಕಾರಣ ಈ ಒಕ್ಕೂಟಕ್ಕೆ ಗೌರವ ಸಲ್ಲಿಸುವ ಉದ್ದೇಶದಿಂದ ಮಾತ್ರ ಪಾಕ್‌ಗೆ ತೆರಳಿ ಭಾಷಣ ಮಾಡಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಆಂದೋಲನ ಡೆಸ್ಕ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

2 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

10 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

10 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

10 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

10 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

10 hours ago