ಹೊಸದಿಲ್ಲಿ: 2025-26ನೇ ಸಾಲಿನ ಸಂಸತ್ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಜಂಟಿ ಸದಸ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾತನಾಡಲಿದ್ದು, ನಾಳೆ ಅಂದರೆ ಫೆ.1 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ.
ಇಂದಿನಿಂದ ಏಪ್ರಿಲ್ 4 ರವರೆಗೆ 2 ಹಂತಗಳಲ್ಲಿ ಬಜೆಟ್ ಅಧಿವೇಶನ ನಡೆಯಲಿದ್ದು, ಮೊದಲ ಹಂತದ ಬಜೆಟ್ ಫೆ.13ಕ್ಕೆ ಮುಕ್ತಾಯವಾಗಲಿದೆ. 2ನೇ ಹಂತದ ಬಜೆಟ್ ಅಧಿವೇಶನ ಮಾರ್ಚ್ 10 ರಿಂದ ಆರಂಭವಾಗಿ ಏಪ್ರಿಲ್ 4ಕ್ಕೆ ಮುಕ್ತಾಯವಾಗಲಿದೆ.
ಅಧಿವೇಶನದಲ್ಲಿ ವಕ್ಫ್ ತಿದ್ದುಪಡಿ ಸೇರಿದಂತೆ ಇತರ ಮೂರು ಹೊಸ ಕಾನೂನುಗಳನ್ನು ತರಲು ಕೇಂದ್ರ ಮುಂದಾಗಿದೆ.