ದೇಶ- ವಿದೇಶ

ಸಂಸತ್‌ ಭವನ ಹಂಗಾಮ ಮಾಡುವ ಸ್ಥಳ ಅಲ್ಲ: ಚಳಿಗಾಲದ ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ

ನವದೆಹಲಿ: ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ.

ಭಾರತ ಪ್ರಜಾಪ್ರಭುತ್ವವನ್ನು ಗೆಲ್ಲಿಸಿದೆ ಎಂದು ಬಿಹಾರ ಚುನಾವಣೆ ಫಲಿತಾಂಶವನ್ನು ಉಲ್ಲೇಖಿಸಿ ವಿಪಕ್ಷಗಳಿಗೆ ಟಾಂಗ್‌ ನೀಡಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನವು ಸಂಸ್ಥೆಯು ಏನು ಯೋಚಿಸುತ್ತಿದೆ, ಏನು ಮಾಡಲು ಬಯಸುತ್ತಿದೆ ಹಾಗೂ ಏನು ಸಾಧಿಸಲಿದೆ ಎಂಬುದರ ಮೇಲೆ ಕೇಂದ್ರೀಕೃತವಾಗಿರಬೇಕು ಎಂದು ಹೇಳಿದರು.

ಇದನ್ನು ಓದಿ: ಮೆಕ್ಕೆಜೋಳಕ್ಕೆ 2400 ರೂ ನಿಗದಿ: ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ಅಧಿವೇಶನ ಪ್ರಾರಂಭವಾಗುವ ಮುನ್ನ ತಮ್ಮ ಹೇಳಿಕೆಗಳಲ್ಲಿ ಪ್ರಧಾನಿ ಮೋದಿ ಅವರು ವಿರೋಧ ಪಕ್ಷಗಳು ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಎತ್ತಬೇಕು. ಆದರೆ ಸೋಲಿನ ಹತಾಶೆಯನ್ನು ಮೀರಿ ನಿಲ್ಲಬೇಕು ಎಂದು ಕರೆ ನೀಡಿದರು.

ಅಧಿವೇಶನವು ಅರ್ಥಪೂರ್ಣ ಚರ್ಚೆ ಹಾಗೂ ನಿರ್ಧಾರಗಳೊಂದಿಗೆ ಮುಂದುವರಿಯುತ್ತದೆ. ರಾಷ್ಟ್ರದ ಆದ್ಯತೆಗಳನ್ನು ಮುಂಚೂಣಿಯಲ್ಲಿಡುತ್ತದೆ ಎಂದು ಆಶಿಸಿದರು.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

2 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago