ನವದೆಹಲಿ : ಸಂಸತ್ ಮುಂಗಾರು ಅಧಿವೇಶನ ಪ್ರಾರಂಭವಾಗಿದ್ದು, ಆರಂಭದಲ್ಲಿ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಲಾಯಿತು.
ಜಮ್ಮು-ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕ್‌ನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ್ ನಂತರ ಮೊದಲ ಬಾರಿಗೆ ಈ ಅಧಿವೇಶನ ನಡೆಯುತ್ತಿದೆ.
ವಿರೋಧ ಪಕ್ಷವು ವಿವಿಧ ವಿಷಯಗಳನ್ನು ಕುರಿತು ಆಡಳಿತ ಪಕ್ಷದ ವಿರುದ್ಧ ಮುಗಿಬೀಳಲು ಮುಂದಾಗಿದೆ.
ಒಂದು ತಿಂಗಳ ಕಾಲ ನಡೆಯುವ ಅಧಿವೇಶನದಲ್ಲಿ ಆಪರೇಷನ್ ಸಿಂಧೂರ್, ಬಿಹಾರದ ಮತದಾರರ ಪಟ್ಟಿಯ ಪರಿಷ್ಕರಣೆ, ಏರ್ ಇಂಡಿಯಾ ವಿಮಾನ ಅಪಘಾತ ಹಾಗೂ ಆದಾಯ ತೆರಿಗೆ ಮಸೂದೆ 2025 ಸೇರಿದಂತೆ ಹಲವಾರು ಪ್ರಮುಖ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸುವ ಸಾಧ್ಯತೆಯಿದೆ.
ಇಂದು ಅಧಿವೇಶನದ ಆರಂಭದಲ್ಲಿ ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಲಾಯಿತು.





