Mysore
25
overcast clouds

Social Media

ಭಾನುವಾರ, 17 ಮೇ 2026
Light
Dark

ಸಂಸತ್‌ ಮುಂಗಾರು ಅಧಿವೇಶನ: ಮಂಗಳವಾರ ಕೈ ನಾಯಕರ ಸಭೆ ಕರೆದ ಸೋನಿಯಾ ಗಾಂಧಿ

sonia gandhi

ನವದೆಹಲಿ: ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಪಕ್ಷದ ಕಾರ್ಯತಂತ್ರವನ್ನು ಅಂತಿಮಗೊಳಿಸಲು ಕಾಂಗ್ರೆಸ್‌‍ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರು ಮಂಗಳವಾರ ಪ್ರಮುಖ ಸಿಪಿಪಿ ಸಭೆ ಕರೆದಿದ್ದಾರೆ.

ಈ ಸಭೆಯು ಹಲವಾರು ವಿಷಯಗಳ ಕುರಿತು ವಿರೋಧ ಪಕ್ಷಗಳು ಮತ್ತು ಸರ್ಕಾರದ ನಡುವೆ ಘರ್ಷಣೆಗೆ ಸಾಕ್ಷಿಯಾಗುವ ನಿರೀಕ್ಷೆಯಿದೆ. ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು ಕೈಗೊಳ್ಳುವ ಚುನಾವಣಾ ಆಯೋಗದ ಕ್ರಮದ ಬಗ್ಗೆ ವಿರೋಧ ಪಕ್ಷಗಳು ಬಲವಾದ ಕಳವಳವನ್ನು ವ್ಯಕ್ತಪಡಿಸುವ ನಿರೀಕ್ಷೆಯಿದೆ.

ಪಹಲ್ಗಾಮ್‌ ದಾಳಿ, ಆಪರೇಷನ್‌ ಸಿಂಧೂರ್‌ ಮತ್ತು ಅದರ ನಂತರದ ರಾಜತಾಂತ್ರಿಕ ಸಂಪರ್ಕದ ಬಗ್ಗೆ ಚರ್ಚೆಗೆ ಕಾಂಗ್ರೆಸ್‌‍ ಒತ್ತಾಯಿಸುತ್ತಿದೆ. ಕಾಂಗ್ರೆಸ್‌‍ ಸಂಸದೀಯ ಕಾರ್ಯತಂತ್ರ ಗುಂಪಿನ ಸಭೆಯಲ್ಲಿ ಕಾಂಗ್ರೆಸ್‌‍ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಇತರರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಜನಪಥ್‌ ನಿವಾಸದಲ್ಲಿ ಸಭೆ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ.21ರಂದು ಪ್ರಾರಂಭವಾಗಿ ಆಗಸ್ಟ್‌.21ರವರೆಗೆ ನಡೆಯಲಿದೆ ಎಂದು ಸರ್ಕಾರ ಘೋಷಿಸಿದೆ.

Tags:
error: Content is protected !!