Mysore
21
overcast clouds

Social Media

ಮಂಗಳವಾರ, 03 ಡಿಸೆಂಬರ್ 2024
Light
Dark

ವಿರೋಧ ಪಕ್ಷಗಳಿಂದ ಹೆಚ್ಚಾದ ಗದ್ದಲ: ಸಂಸತ್‌ ಕಲಾಪ ನಾಳೆಗೆ ಮುಂದೂಡಿಕೆ

ನವದೆಹಲಿ: ಲೋಕಸಭೆಯ ನೂತನ ಸಂಸತ್‌ ಕಚೇರಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ಮಧ್ಯೆ ವಿರೋಧ ಪಕ್ಷಗಳ ಸಂಸದರು ಧರಣಿ ಮಾಡಿ ಕೋಲಾಹಲ ಸೃಷ್ಟಿಸಿದ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

ಇಂದು ಲೋಕಸಭೆಯಲ್ಲಿ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಗೌತಮ್ ಅದಾನಿ ಲಂಚ ವಿವಾದ ಸೇರಿದಂತೆ ವಿವಿಧ ವಿಷಯಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಲು ಮುಂದಾದರು. ಹೀಗಾಗಿ ಲೋಕಸಭೆಯ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ ಎಂದು ರಾಜ್ಯಸಭೆಯ ಸಭಾಪತಿ ಜಗದೀಪ್ ಧನ್‌ಕರ್‌ ಘೋಷಿಸಿದರು.

ಈ ವೇಳೆ ಸಭಾಪತಿ ಓಂ ಬಿರ್ಲಾ ಅವರು ಸದನದಲ್ಲಿ ಅದಾನಿ ವಿವಾದ ಮತ್ತು ಸಂಭಾಲ್‌ನಲ್ಲಿ ಇತ್ತೀಚಿನ ಹಿಂಸಾಚಾರದ ಬಗ್ಗೆ ಚರ್ಚಿಸಲು ಬಯಸಿದ ಪ್ರತಿಪಕ್ಷದ ಸದಸ್ಯರನ್ನು ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡುವಂತೆ ಕೇಳಿದರು. ಆದರೆ, ಪ್ರತಿಪಕ್ಷಗಳು ಪ್ರತಿಭಟನೆ ಮುಂದುವರಿಸಿದ ಕಾರಣ, ಈ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು. ಬಳಿಕ ಮಧ್ಯಾಹ್ನದ ಅವಧಿಯಲ್ಲಿಯೂ ಪ್ರತಿಭಟನೆ ಹೆಚ್ಚಾದ ಬೆನ್ನಲ್ಲೇ ಕಲಾಪವನ್ನು ನಾಳೆಗೆ ಮುಂದೂಡಿಕೆ ಮಾಡಿದರು.

Tags: