ನವದೆಹಲಿ: ಲೋಕಸಭೆಯ ನೂತನ ಸಂಸತ್ ಕಚೇರಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ಮಧ್ಯೆ ವಿರೋಧ ಪಕ್ಷಗಳ ಸಂಸದರು ಧರಣಿ ಮಾಡಿ ಕೋಲಾಹಲ ಸೃಷ್ಟಿಸಿದ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.
ಇಂದು ಲೋಕಸಭೆಯಲ್ಲಿ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಗೌತಮ್ ಅದಾನಿ ಲಂಚ ವಿವಾದ ಸೇರಿದಂತೆ ವಿವಿಧ ವಿಷಯಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಲು ಮುಂದಾದರು. ಹೀಗಾಗಿ ಲೋಕಸಭೆಯ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ ಎಂದು ರಾಜ್ಯಸಭೆಯ ಸಭಾಪತಿ ಜಗದೀಪ್ ಧನ್‌ಕರ್ ಘೋಷಿಸಿದರು.
ಈ ವೇಳೆ ಸಭಾಪತಿ ಓಂ ಬಿರ್ಲಾ ಅವರು ಸದನದಲ್ಲಿ ಅದಾನಿ ವಿವಾದ ಮತ್ತು ಸಂಭಾಲ್‌ನಲ್ಲಿ ಇತ್ತೀಚಿನ ಹಿಂಸಾಚಾರದ ಬಗ್ಗೆ ಚರ್ಚಿಸಲು ಬಯಸಿದ ಪ್ರತಿಪಕ್ಷದ ಸದಸ್ಯರನ್ನು ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡುವಂತೆ ಕೇಳಿದರು. ಆದರೆ, ಪ್ರತಿಪಕ್ಷಗಳು ಪ್ರತಿಭಟನೆ ಮುಂದುವರಿಸಿದ ಕಾರಣ, ಈ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು. ಬಳಿಕ ಮಧ್ಯಾಹ್ನದ ಅವಧಿಯಲ್ಲಿಯೂ ಪ್ರತಿಭಟನೆ ಹೆಚ್ಚಾದ ಬೆನ್ನಲ್ಲೇ ಕಲಾಪವನ್ನು ನಾಳೆಗೆ ಮುಂದೂಡಿಕೆ ಮಾಡಿದರು.
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…
ಹನೂರು : ಜಮೀನಿನಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಹಾಗೂ 5 ಲಕ್ಷ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ…
ಮಂಡ್ಯ : ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹವಾಗಿ ೫ ಲಕ್ಷ ರೂ.ಗಳನ್ನು ನೀಡುವಂತೆ ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗಳಿಗೆ…
ಸರಗೂರು : ನಾಲೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದಾಗ ಯುವಕನೊಬ್ಬ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮೇಗೌಡರ…
ವಿಧಾನಸಭೆ : ನಗರಾಭಿವೃದ್ಧಿ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಒಳಚರಂಡಿ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳ ನಿರ್ವಹಣೆ ಅಸಾಧ್ಯ ಎಂದು…