Mysore
27
overcast clouds

Social Media

ಗುರುವಾರ, 16 ಏಪ್ರಿಲ 2026
Light
Dark

ಸಂಸತ್‌ ವಿಶೇಷ ಅಧಿವೇಶನ: ಮೂರು ಮಹತ್ವದ ಮಸೂದೆ ಮಂಡನೆ

ನವದೆಹಲಿ: ಇಂದಿನಿಂದ ಆರಂಭವಾಗಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದೆ.

ಸಂವಿಧಾನದ ತಿದ್ದುಪಡಿ ಮಸೂದೆ-2026, ಕೇತ್ರ ಮರುವಿಂಗಡಣೆ ಮಸೂದೆ-2026 ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ ಮಸೂದೆ-2026ನ್ನು ಮಂಡಿಸಲಾಗಿದೆ.

ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು ಸಂವಿಧಾನ ತಿದ್ದುಪಡಿ ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆಗಳನ್ನು ಮಂಡಿಸಿದರೆ, ಗೃಹ ಸಚಿವ ಅಮಿತ್‌ ಶಾ ಅವರು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ ಮಸೂದೆಯನ್ನು ಮಂಡಿಸಿದರು.

ಮಸೂದೆ ಮಂಡನೆಯಾಗುತ್ತಿದ್ದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರು, ರಾಜ್ಯಸಭೆಯಿಂದ ಹೊರನಡೆದರು. ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್‌ ಬೆಂಬಲಿಸುತ್ತದೆ. ಆದರೆ ಸಂಸತ್ತಿನ ಸ್ಥಾನಗಳ ಸಂಖ್ಯೆ ಹೆಚ್ಚಳವನ್ನು ವಿರೋಧಿಸುತ್ತದೆ ಎಂದು ಪಕ್ಷ ಸ್ಪಷ್ಟಪಡಿಸಿದೆ.

Tags:
error: Content is protected !!