ದೇಶ- ವಿದೇಶ

ಪ್ಯಾಸೆಂಜರ್‌, ಗೂಡ್ಸ್‌ ರೈಲು ಪರಸ್ಪರ ಡಿಕ್ಕಿ : 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಹರಾಷ್ಟ್ರ: ದೇಶದಲ್ಲಿಂದು ಮತ್ತೊಂದು ರೈಲು ದುರಂತ ಸಂಭವಿಸಿದೆ. ಮಹಾರಾಷ್ಟ್ರದ ಗೋಂಡಿಯಾದಲ್ಲಿ ಬುಧವಾರ ನಸುಕಿನ ಜಾವ ಪ್ಯಾಸೆಂಜರ್‌ ರೈಲು ಹಾಗೂ ಗೂಡ್ಸ್‌ ರೈಲು ಪರಸ್ಪರ ಡಿಕ್ಕಿಯಾಗಿದ್ದು, ಈ ಹಿನ್ನೆಲೆ 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತಕ್ಕೆ ಪ್ಯಾಸೆಂಜರ್‌ ರೈಲಿನ ಮೂರು ಬೋಗಿಗಳು ಹಳಿ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

ಮಹಾರಾಷ್ಟ್ರದ ಗೋಂಡಿಯಾದಲ್ಲಿ ಬುಧವಾರ ನಸುಕಿನ ಜಾವ 2.30ರ ವೇಳೆಗೆ ಪ್ಯಾಸೆಂಜರ್‌ ರೈಲು ಹಾಗೂ ಗೂಡ್ಸ್‌ ರೈಲು ನಡುವೆ ಪರಸ್ಪರ ಡಿಕ್ಕಿ ಸಂಭವಿಸಿ ಅಪಘಾತವಾಗಿದೆ. ಈ ಹಿನ್ನೆಲೆ ಪ್ರಯಾಣಿಕ ರೈಲಿನಲ್ಲಿದ್ದ 3 ಬೋಗಿಗಳು ಹಳಿ ತಪ್ಪಿದ್ದು, ಈ ಘಟನೆಯಲ್ಲಿ 50 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ, ಅದೃಷ್ಟವಶಾತ್‌ ಈ ಅಪಘಾತದಲ್ಲಿ ಯಾರೂ ಪ್ರಾಣ ಕಳೆದುಕೊಂಡಿಲ್ಲ ಎಂದು ತಿಳಿದುಬಂದಿದೆ.

ಹಳಿ ತಪ್ಪಿದ ಪ್ಯಾಸೆಂಜರ್‌ ರೈಲು ಛತ್ತೀಸ್‌ಗಢದ ಬಿಲಾಸ್ಪುರದಿಂದ ರಾಜಸ್ಥಾನದ ಜೋಧಪುರಕ್ಕೆ ತೆರಳುತ್ತಿತ್ತು. ಇನ್ನು, ಸಿಗ್ನಲ್‌ ನೀಡುವಲ್ಲಿ ಉಂಟಾದ ಎಡವಟ್ಟಿನಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಪ್ರಯಾಣಿಕ ರೈಲಿನ ಲೋಕೋಪೈಲಟ್‌ ಎಮರ್ಜೆನ್ಸಿ ಬ್ರೇಕ್‌ ಅನ್ನು ಹಾಕಿದರೂ ಗೂಡ್ಸ್‌ ರೈಲಿನ ಜತೆ ಡಿಕ್ಕಿಯಾಗುವುದನ್ನು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದೂ ಹೇಳಲಾಗಿದೆ. ಆದರೆ, ಬೆಳಗ್ಗಿನ ಜಾವ 4: 30 ರ ವೇಳೆಗೆ ಹಳಿ ತಪ್ಪಿದ ರೈಲಿನ ಬೋಗಿಗಳನ್ನು ಸರಿ ಪಡಿಸಲಾಗಿದೆ. ನಂತರ, ಅಪಘಾತ ನಡೆದ ಸ್ಥಳದಿಂದ ಬೆಳಗ್ಗೆ 5: 24 ರ ವೇಳೆಗೆ ಹೊರಟಿತು ಹಾಗೂ 5:44ಕ್ಕೆ ಗೋಂಡಿಯಾ ರೈಲು ನಿಲ್ದಾಣವನ್ನು ಅಪಘಾತಕ್ಕೊಳಗಾದ ಪ್ರಯಾಣಿಕ ರೈಲು ತೆರಳಿತು ಎಂದೂ ಭಾರತೀಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಹಾಗೂ 5: 45 ರ ವೇಳೆಗೆ ಅಪ್‌ ಹಾಗೂ ಡೌನ್‌ ಟ್ರಾಫಿಕ್‌ ಪುನಾರಂಭವಾಯಿತು ಎಂದೂ ರೈಲ್ವೆ ಇಲಾಖೆ ತಿಳಿಸಿದೆ.

ಎಕ್ಸ್‌ಪ್ರೆಸ್‌ ರೈಲಿನ 4 ಟೈರ್‌ಗಳು ಟ್ರ್ಯಾಕ್‌ನಿಂದ ಹೊರಕ್ಕೆ ಬಂದು ಈ ಅಪಘಾತವಾಗಿದ್ದು, ಯಾವ ಪ್ರಯಾಣಿಕರಿಗೂ ಗಂಭೀರ ಗಾಯಗಳಾಗಿಲ್ಲ ಎಂದೂ ರೈಲ್ವೆ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲದೆ, ರೈಲ್ವೆ ಸುರಕ್ಷತಾ ಆಯುಕ್ತ ಈ ಅಪಘಾತ ಸಂಬಂಧ ತನಿಖೆ ನಡೆಸಲಿದೆ ಎಂದೂ ಹೇಳಿದ್ದಾರೆ.

andolana

Recent Posts

ರಾಜ್ಯದಲ್ಲಿ ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ 5000 ದಂಡ, 3 ವರ್ಷ ಜೈಲು ಶಿಕ್ಷೆ

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್‌ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…

54 mins ago

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…

1 hour ago

ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…

1 hour ago

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…

1 hour ago

ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಗ್ಯಾರಂಟಿ ಯೋಜನೆ ವಿರೋಧಿಸಿಲ್ಲ: ಸಚಿವ ಚಲುವರಾಯಸ್ವಾಮಿ

ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…

2 hours ago

ಕೊಡಗು| ಆಸ್ತಿ ವಿಚಾರಕ್ಕೆ ಕಲಹ: ಅಣ್ಣನ ಮಗನ ಮೇಲೆ ಗುಂಡಿನ ದಾಳಿ

ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…

2 hours ago