ನವದೆಹಲಿ: ಲೋಕಸಭೆಯಲ್ಲಿ ರೈಲ್ವೆ ತಿದ್ದುಪಡಿ ಮಸೂದೆ ಅಂಗೀಕರಿಸಿದ್ದು, ಇದು ಭಾರತೀಯ ರೈಲ್ವೆಯನ್ನು ಖಾಸಗೀಕರಣ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ಈ ತಿದ್ದುಪಡಿಯು ರೈಲ್ವೆಯನ್ನು ಖಾಸಗೀಕರಣಗೊಳಿಸುತ್ತದೆ ಎಂಬ ನಕಲಿ ನಿರೂಪಣೆಯನ್ನು ಹುಟ್ಟುಹಾಕಲಾಗಿದೆ ಎಂದರು.
ಇನ್ನು ಸಂವಿಧಾನದ ಬಗ್ಗೆ ಅವರ ನಕಲಿ ನಿರೂಪಣೆ ವಿಫಲವಾಗಿದೆ. ಈಗ ಇದು ಸಹ ವಿಫಲವಾಗಲಿದೆ ಎಂದು ರೈಲ್ವೆ ಸಚಿವರು ತಿಳಿಸಿದ್ದಾರೆ.
ಚರ್ಚೆಯ ನಂತರ ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕರಿಸಲಾಯಿತು.
ಇಂಡಿಯನ್ ರೈಲ್ವೆ ಬೋರ್ಡ್ ಕಾಯ್ದೆ1905ನ್ನು ರೈಲ್ವೆ ಆಕ್ಟ್ 1989ಗೆ ಸೇರಿಸುವ ಉದ್ದೇಶವನ್ನು ಮಸೂದೆ ಹೊಂದಿದೆ. ಇದು ಭಾರತೀಯ ರೈಲ್ವೆಯ ಕಾನೂನಿನ ಚೌಕಟ್ಟನ್ನು ಸರಳೀಕರಿಸಲಿದೆ ಎಂದು ವೈಷ್ಣವ್ ಹೇಳಿದ್ದಾರೆ.
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…