ಪಾಟ್ನಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಹಾರದ ಬೇಗುಸರೈನಲ್ಲಿ ಕೆರೆಗೆ ಹಾರಿ ಮೀನು ಹಿಡಿದಿದ್ದಾರೆ.
ಭಾನುವಾರ ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನಂತರ ಪ್ರಚಾರದ ಸಮಯದಲ್ಲಿ ಸ್ಥಳೀಯ ಮೀನುಗಾರರನ್ನು ಭೇಟಿಯಾದರು.
ಈ ವೇಳೆ ಮೀನುಗಾರರ ಜೊತೆಗೆ ದೋಣಿಯಲ್ಲಿ ಕೆರೆಯ ಮಧ್ಯ ಭಾಗಕ್ಕೆ ತೆರಳಿ ಕೆರೆಗೆ ಹಾರಿದರು. ಅಲ್ಲಿ ಅವರು ಸಾಂಪ್ರದಾಯಿಕ ಮೀನುಗಾರಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.





