Mysore
22
mist

Social Media

ಸೋಮವಾರ, 28 ಅಕ್ಟೋಬರ್ 2024
Light
Dark

ಪಶ್ಚಿಮ ಬಂಗಾಳದಲ್ಲಿ ಶಾಂತಿ ನೆಲೆಸಲು ಭೂಬಂದರು ಅಗತ್ಯ: ಕೇಂದ್ರ ಗೃಹ ಸಚಿವ ಅಮಿತ್‌ ಶಾ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಶಾಂತಿ ನೆಲೆಸಲು ಹಾಗೂ ಗಡಿಗಳಲ್ಲಿ ಒಳನುಸುಳುವಿಕೆ ಮೇಲೆ ನಿಯಂತ್ರಣ ಸಾಧಿಸಲು ಭೂ ಬಂದರು ಅಗತ್ಯವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಗಡಿಯಲ್ಲಿ ನಿರ್ಮಿಸಿರುವ ಪ್ರಯಾಣಿಕರ ನೂತನ ಟರ್ಮಿನಲ್‌ ಉದ್ಘಾಟಿಸಿ ಮಾತನಾಡಿದ ಅವರು, 2026ರ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಕ್ರಮ ವಲಸೆಯನ್ನು ತಡೆಗಟ್ಟಲಾಗುವುದು ಎಂದು ಭರವಸೆ ನೀಡಿದರು.

ನಂತರ, ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದೆ. ದೇಶದಲ್ಲಿ ಶಾಂತಿ ನೆಲೆಸಲು ಭೂಬಂದರುಗಳು ಮುಖ್ಯ ಕಾರಣಗಳಾಗಿವೆ. ಹೀಗಾಗಿ ಬಾಂಗ್ಲಾದೇಶ ಹಾಗೂ ಭಾರತದ ಸಂಬಂಧ ಉತ್ತಮವಾಗಿರಬೇಕೆಂದರೆ ಗಡಿಗಳಲ್ಲಿ ನುಸುಳುವಿಕೆಯ ವಿರುದ್ಧ ಸರಿಯಾದ ಕ್ರಮಕೈಗೊಳ್ಳುವುದು ಅಗತ್ಯ ಎಂದು ಹೇಳಿದರು.

Tags: