ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಶಾಂತಿ ನೆಲೆಸಲು ಹಾಗೂ ಗಡಿಗಳಲ್ಲಿ ಒಳನುಸುಳುವಿಕೆ ಮೇಲೆ ನಿಯಂತ್ರಣ ಸಾಧಿಸಲು ಭೂ ಬಂದರು ಅಗತ್ಯವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಗಡಿಯಲ್ಲಿ ನಿರ್ಮಿಸಿರುವ ಪ್ರಯಾಣಿಕರ ನೂತನ ಟರ್ಮಿನಲ್ ಉದ್ಘಾಟಿಸಿ ಮಾತನಾಡಿದ ಅವರು, 2026ರ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಕ್ರಮ ವಲಸೆಯನ್ನು ತಡೆಗಟ್ಟಲಾಗುವುದು ಎಂದು ಭರವಸೆ ನೀಡಿದರು.
ನಂತರ, ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದೆ. ದೇಶದಲ್ಲಿ ಶಾಂತಿ ನೆಲೆಸಲು ಭೂಬಂದರುಗಳು ಮುಖ್ಯ ಕಾರಣಗಳಾಗಿವೆ. ಹೀಗಾಗಿ ಬಾಂಗ್ಲಾದೇಶ ಹಾಗೂ ಭಾರತದ ಸಂಬಂಧ ಉತ್ತಮವಾಗಿರಬೇಕೆಂದರೆ ಗಡಿಗಳಲ್ಲಿ ನುಸುಳುವಿಕೆಯ ವಿರುದ್ಧ ಸರಿಯಾದ ಕ್ರಮಕೈಗೊಳ್ಳುವುದು ಅಗತ್ಯ ಎಂದು ಹೇಳಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…