ದೇಶ- ವಿದೇಶ

ಭಯೋತ್ಪಾದನೆ ನಿಂತರಷ್ಟೇ ಪಾಕಿಸ್ತಾನದೊಂದಿಗೆ ಶಾಂತಿ ಸಭೆ: ಸಚಿವ ರಾಜನಾಥ್‌ ಸಿಂಗ್‌

ನವದೆಹಲಿ: ಭಯೋತ್ಪಾದನೆ ಸಂಪೂರ್ಣ ನಿಂತರೆ ಮಾತ್ರ ನೆರೆಯ ದೇಶ ಪಾಕಿಸ್ತಾನದೊಂದಿಗೆ ಶಾಂತಿ ಸಭೆ ನಡೆಸುತ್ತೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.

ಪಾಕ್‌ ಸೇರಿದಂತೆ ನೆರೆ ಹೊರೆಯ ದೇಶಗಳೊಂದಿಗೆ ಶಾಂತಿಯುತ ಸಂಬಂಧವನ್ನು ಬೆಳೆಸುವ ಭಾರತದ ಬದ್ಧತೆಯ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮಾತುಗಳನ್ನಾಡಿದ್ದಾರೆ.

ಪಾಕಿಸ್ತಾನದೊಂದಿಗೆ ಶಾಂತಿ ಮಾತುಕತೆ ಆಗಬೇಕು ಎಂದರೆ, ಭಾರತವನ್ನು ಗುರಿಯಾಗಿಸುವ ಭಯೋತ್ಪಾದಕ ಚಟುವಟಿಕೆಗಳನ್ನು ನಿಲ್ಲಿಸಬೇಕು. ಆಗ ಮಾತ್ರ ಪಾಕಿಸ್ತಾನದೊಂದಿಗೆ ಶಾಂತಿ ಸಭೆ ನಡೆಸಲಾಗುವುದು ಎಂದು ಖಡಕ್‌ ಆಗಿ ಹೇಳಿದರು.

ನಾವು ಯಾವಾಗಲೂ ಶಾಂತಿಯುತವಾಗಿ ಬದುಕಲು ಇಷ್ಟ ಪಡುತ್ತೇವೆ. ನೆರೆ ಹೊರೆಯ ದೇಶಗಳೊಂದಿಗೆ ಉತ್ತಮ ಸಂಬಂಧ ಮುಂದುವರಿಸಿಕೊಂಡು ಹೋಗುತ್ತೇವೆ. ಆದರೆ ಭಯೋತ್ಪಾದನೆ ನಿಂತರಷ್ಟೇ ನಾವು ಪಾಕಿಸ್ತಾನದೊಂದಿಗೆ ಶಾಂತಿ ಸಭೆ ನಡೆಸಲು ಮುಂದಾಗುತ್ತೇವೆ ಎಂದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇಂಡಿಗೋ ಬಿಕ್ಕಟ್ಟು : ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…

2 mins ago

ಜನವರಿಯಿಂದ ಇಂದಿರಾ ಕಿಟ್‌ ವಿತರಣೆ

ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು…

30 mins ago

ಲ್ಯಾಂಡ್‌ ಲಾರ್ಡ್‌ ಚಿತ್ರದ ಟೀಸರ್‌ ರಿಲೀಸ್‌

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ ಲಾರ್ಡ್‌ ಚಿತ್ರದಲ್ಲಿ ನಟ ರಾಜ್‌ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…

43 mins ago

ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಹೇಳಿದ್ದಿಷ್ಟು.!

ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…

1 hour ago

ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂ ಸಿದ್ದುಗೆ ಎಚ್‌ಡಿಕೆ ಸವಾಲು

ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…

2 hours ago

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ: ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸಿ ಎಂದ ಸಿ.ಟಿ.ರವಿ

ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…

2 hours ago