ದೇಶ- ವಿದೇಶ

ಪೆನ್ನಾರ್‌ ನದಿ ಜಲವಿವಾದ: ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಆದೇಶ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ನ್ಯಾಯಮಂಡಳಿ ರಚಿಸುವಂತೆ ಸುಪ್ರೀಂಕೋರ್ಟ್‌ ಮಹತ್ವದ ಆದೇಶ ನೀಡಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಕ್ರಮನಾಥ್‌ ಅವರ ಪೀಠ, ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ನ್ಯಾಯಮಂಡಳಿ ರಚಿಸುವಂತೆ ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಸೂಚನೆ ನೀಡಿದೆ.

ಇದೀಗ ಸುಪ್ರೀಂಕೋರ್ಟ್‌ ತಮಿಳುನಾಡಿನ ಅರ್ಜಿಯನ್ನು ಪುರಸ್ಕರಿಸುವ ಮೂಲಕ ಕರ್ನಾಟಕಕ್ಕೆ ಹಿನ್ನಡೆ ಆಗಿದೆ.

ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದಗಳನ್ನು ಬಗೆಹರಿಸಲು ನ್ಯಾಯಾಧೀಕರಣ ರಚಿಸುವಂತೆ ಕೋರಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಇದೀಗ ತಮಿಳುನಾಡಿನ ಅರ್ಜಿಯನ್ನು ಪುರಸ್ಕರಿಸಿದೆ. ಜಲವಿವಾದ ನ್ಯಾಯಾಧೀಕರಣ ರಚನೆ ಮಾಡುವಂತೆ ಆದೇಶ ಹೊರಡಿಸಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: ಏನದು ಗೊತ್ತಾ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…

1 hour ago

ಏಪ್ರಿಲ್.‌1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ತುಮಕೂರು: ಏಪ್ರಿಲ್.‌1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…

1 hour ago

ರಂಗೇರಿದ ಉಪಚುನಾವಣೆ ಕಣ: ಸಮರ್ಥ್‌ ಮಲ್ಲಿಕಾರ್ಜುನ್‌, ಉಮೇಶ್‌ ಮೇಟಿಗೆ ಕಾಂಗ್ರೆಸ್‌ ಟಿಕೆಟ್‌

ಬೆಂಗಳೂರು: ಏಪ್ರಿಲ್‌.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…

2 hours ago

ಅಮೇರಿಕಾದ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ ಆಯ್ಕೆ

ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ…

2 hours ago

ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ: ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಟೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಹಾರ್ಮುಜ್‌ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್‌ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗಡುವು…

2 hours ago

ಓದುಗರ ಪತ್ರ: ನಿಲ್ದಾಣದಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…

3 hours ago