ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಪೆನ್ನಾರ್ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ನ್ಯಾಯಮಂಡಳಿ ರಚಿಸುವಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಕ್ರಮನಾಥ್ ಅವರ ಪೀಠ, ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ನ್ಯಾಯಮಂಡಳಿ ರಚಿಸುವಂತೆ ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಸೂಚನೆ ನೀಡಿದೆ.
ಇದೀಗ ಸುಪ್ರೀಂಕೋರ್ಟ್ ತಮಿಳುನಾಡಿನ ಅರ್ಜಿಯನ್ನು ಪುರಸ್ಕರಿಸುವ ಮೂಲಕ ಕರ್ನಾಟಕಕ್ಕೆ ಹಿನ್ನಡೆ ಆಗಿದೆ.
ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದಗಳನ್ನು ಬಗೆಹರಿಸಲು ನ್ಯಾಯಾಧೀಕರಣ ರಚಿಸುವಂತೆ ಕೋರಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇದೀಗ ತಮಿಳುನಾಡಿನ ಅರ್ಜಿಯನ್ನು ಪುರಸ್ಕರಿಸಿದೆ. ಜಲವಿವಾದ ನ್ಯಾಯಾಧೀಕರಣ ರಚನೆ ಮಾಡುವಂತೆ ಆದೇಶ ಹೊರಡಿಸಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…