ದೇಶ- ವಿದೇಶ

ಜನರು ಹೆಚ್ಚು ಹೆಚ್ಚು ಗ್ಯಾಸ್‌ ಬುಕ್‌ ಮಾಡಬೇಡಿ: ಸಚಿವ ಕೆ.ಎಚ್.ಮುನಿಯಪ್ಪ ಮನವಿ

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವವಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಎರಡನೇ ಪತ್ರ ಬರೆಯುತ್ತಿದ್ದಾರೆ. ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಕೇಂದ್ರ ಬಗ್ಗೆ ಗಮನಹರಿಸಬೇಕೆಂದು ಪತ್ರ ಬರೆಯುತ್ತಿದ್ದಾರೆ. ಆಸ್ಪತ್ರೆಗಳು ಶಿಕ್ಷಣ ಸಂಸ್ಥೆಗಳಿಗೆ ರೈಲ್ವೆ ಕ್ಯಾಂಟಿನ್‌ಗೆ 100% ಕಮರ್ಷಿಯಲ್‌ ಸಿಲಿಂಡರ್‌ ಪೂರೈಸುತ್ತೇವೆ ಎಂದು ಹೇಳಿದರು.

ರಾಜ್ಯದಲ್ಲಿ ನಿತ್ಯ 44 ಸಾವಿರ ವಾಣಿಜ್ಯ ಸಿಲಿಂಡರ್‌ ಬೇಕು. ನಮಗೆ 9 ಸಾವಿರ ಕಮರ್ಷಿಯಲ್‌ ಸಿಲಿಂಡರ್‌ ಸಿಗುತ್ತದೆ. ಈ ಪೈಕಿ 4 ಸಾವಿರ ಆಸ್ಪತ್ರೆಗೆ ಹೋಗುತ್ತಿದೆ. ಹೋಟೆಲ್‌ಗಳಿಗೆ ನಿತ್ಯ 1000 ಸಿಲಿಂಡರ್‌ ಪೂರೈಸುತ್ತೇವೆ. ಆಟೋಗಳಿಗೆ 2500 ಗ್ಯಾಸ್‌ ಸಿಲಿಂಡರ್‌ ನೀಡಲು ನಿರ್ಧಾರ ಮಾಡಲಾಗಿದೆ. ಆದ್ದರಿಂದ ಸದ್ಯದ ಮಟ್ಟಿಗೆ ಗ್ರಾಹಕರು ಹೆಚ್ಚಾಗಿ ಸಿಲಿಂಡರ್‌ಗಳನ್ನು ಬುಕ್‌ ಮಾಡಬಾರದು ಎಂದು ಮನವಿ ಮಾಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

11 mins ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

18 mins ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

33 mins ago

ಎಲ್‌ಪಿಜಿ ಗ್ರಾಹಕರಿಗೆ ಬಯೋಮೆಟ್ರಿಕ್ ದೃಢಿಕರಣ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಹೊಸದಿಲ್ಲಿ : ಹಾರ್ಮುಜ್ ಜಲಸಂಧಿ ಸಂಘರ್ಷದಿಂದ ಉಂಟಾದ ಅಡುಗೆ ಅನಿಲ (ಎಲ್‌ಪಿಜಿ) ಸರಬರಾಜು ಕೊರತೆಯ ನಡುವೆ ಕೇಂದ್ರ ಪೆಟ್ರೋಲಿಯಂ ಮತ್ತು…

42 mins ago

ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ನಿಷೇಧ : ಬೈರತಿ ಸುರೇಶ್

• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…

2 hours ago

ವಕ್ಫ್‌ ಒತ್ತುವರಿ ಆಸ್ತಿ ತೆರವಿಗೆ ಕ್ರಮ : ಸಚಿವ ಜಮೀರ್‌ ಅಹಮದ್‌

ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ,…

2 hours ago