ದೇಶ- ವಿದೇಶ

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ: ಕೇಂದ್ರ ಅರಣ್ಯ ಸಚಿವರ ಜೊತೆ ಎಚ್‌ಡಿಕೆ ಮಾತುಕತೆ

ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಭೂಪೇಂದ್ರ ಯಾದವ್‌ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು.

ಸಂಸತ್‌ ಭವನದಲ್ಲಿರುವ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಈ ಭೇಟಿಯ ವೇಳೆ ಕುಮಾರಸ್ವಾಮಿ ಅವರು; ಮುಖ್ಯವಾಗಿ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಆನೆಗಳ ದಾಳಿ ಬಗ್ಗೆ ಚರ್ಚೆ ನಡೆಸಿದರು.

ವನ್ಯಜೀವಿ ಉಪಟಳ ನಿರಂತರವಾಗಿ ನಡೆಯುತ್ತಿದೆ. ಇದರಿಂದ ಅನೇಕರು, ಅದರಲ್ಲಿಯೂ ಅರಣ್ಯದ ಅಂಚಿನಲ್ಲಿ ಬೇಸಾಯ ಮಾಡುವ, ದನಕರುಗಳನ್ನು ಮೇಯಿಸುವ ರೈತರು ಬಲಿಯಾಗಿದ್ದಾರೆ. ಇನ್ನೂ ಅನೇಕರು ಗಾಯಗೊಂಡು ಶಾಶ್ವತವಾಗಿ ಅಂಗವೈಕಲ್ಯಕ್ಕೆ ತುತ್ತಾಗುತ್ತಿದ್ದಾರೆ. ಕರ್ನಾಟಕದಲ್ಲಿ ಈ ಸಮಸ್ಯೆ ಬಿಗಡಾಯಿಸಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಭೂಪೇಂದ್ರ ಯಾದವ್‌ ಅವರನ್ನು ವಿನಂತಿಸಿದರು.

ಕುಮಾರಸ್ವಾಮಿ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಈ ಬಗ್ಗೆ ತುರ್ತು ಗಮನ ಹರಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಅದಕ್ಕೆ ಪೂರಕವಾದ ಎಲ್ಲಾ ಮಾಹಿತಿಯನ್ನು ಸಚಿವ ಕುಮಾರಸ್ವಾಮಿ ಅವರಿಂದ ಪಡೆದುಕೊಂಡರು. ಅಲ್ಲದೆ, ಈ ನಿಟಿನಲ್ಲಿ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ಅಧಿಕಾರಿಗಳು ಹೇಗೆ ಕಾರ್ಯ ನಿರ್ವಹಿಸಬೇಕು ಎನ್ನುವ ಕುರಿತು ನಿರ್ದೇಶನ ನೀಡಿದರು.

ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಬಜೆಟ್‌ ಅಧಿವೇಶನ ಮುಗಿಯುವದರೊಳಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಸಚಿವ ಭೂಪೇಂದ್ರ ಯಾದವ್‌ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಅತ್ಯಂತ ತ್ವರಿತವಾಗಿ ಈ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಅಂತರ ಸಚಿವಾಲಯ ವಿಷಯಗಳ ಕುರಿತು ಸಮಾಲೋಚನೆ: ಈ ಭೇಟಿಯ ಸಂದರ್ಭದಲ್ಲಿ ಸಚಿವದ್ವಯರು ತಮ್ಮ ನಿರ್ವಹಣೆಯ ಇಲಾಖೆಗಳಿಗೆ ಸಂಬಂಧಿಸಿದ ಸುದೀರ್ಘ ಚರ್ಚೆ ನಡೆಸಿದರು. ಎರಡೂ ಇಲಾಖೆಗಳ ಸಮನ್ವಯತೆ, ಅಭಿವೃದ್ಧಿ ವಿಷಯಗಳ ಕುರಿತಾಗಿ ಅವರಿಬ್ಬರ ಮಾತುಕತೆ ಕೇಂದ್ರೀಕೃತವಾಗಿತ್ತು. ಜತೆಗೆ, ಉಕ್ಕು ಉದ್ಯಮದ ಬೆಳವಣಿಗೆ ಹಾಗೂ ಅದಕ್ಕೆ ಪೂರಕವಾಗಿ ಪರಿಸರ ಇಲಾಖೆಯಿಂದ ದೊರೆಯುತ್ತಿರುವ ಉತ್ತಮ ಸಹಕಾರದ ಬಗ್ಗೆಯೂ ಮಾತುಕತೆ ನಡೆಸಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

48 mins ago

ಅಮೇರಿಕಾ-ಇರಾನ್‌ ಸಂಧಾನ: ಪಾಕ್‌ನಲ್ಲೇ 2ನೇ ಸುತ್ತಿನ ಮಾತುಕತೆ

ವಾಷಿಂಗ್ಟನ್:‌ ಇರಾನ್‌ ಜೊತೆ ಎರಡನೇ ಸುತ್ತಿನ ಮಾತುಕತೆ ಮುಂದಿನ ಎರಡು ದಿನಗಳಲ್ಲಿ ನಡೆಯಬಹುದು ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌…

1 hour ago

2 ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು…

1 hour ago

ಹನೂರು ತಾಲ್ಲೂಕಿನ ಗ್ರಾಮಗಳಿಗೆ ಜಿಲ್ಲಾಧಿಕಾರ ಶ್ರೀರೂಪ ಭೇಟಿ: ಗ್ರಾಮಸ್ಥರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಾಣೆ,…

1 hour ago

ಯುವಕರಲ್ಲಿ ಮಾನವೀಯತೆ ಹೆಚ್ಚಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ…

2 hours ago

ಚಾಮುಂಡಿ ಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆ

ಮೈಸೂರು: ಚಾಮುಂಡಿಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 40 ವರ್ಷ…

2 hours ago