ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್‌ರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ವ್ಯಕ್ತಿಯನ್ನು ಪೊಲೀಸರು ಪತ್ತೆ ಮಾಡಿದ್ದು, ಈತ ಮಾನಸಿಕ ಅಸ್ವಸ್ಥ ಎಂದು ಮಾಹಿತಿ ನೀಡಿದ್ದಾರೆ.
ಸುದ್ದಿಯ ಹಿನ್ನೆಲೆ ಹೀಗಿದೆ:- ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಮತ್ತೆ ಕೊಲೆ ಬೆದರಿಕೆ
26 ವರ್ಷ ಯುವಕನಾಗಿರುವ ಆರೋಪಿ ಮಾನಸಿಕ ಅಸ್ವಸ್ಥನಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂಬ ಮಾಹಿತಿ ನೀಡಿದ್ದಾರೆ.
ಇನ್ನು ಸಲ್ಮಾನ್ ಖಾನ್‌ಗೆ ಈಗಾಗಲೇ ವೈಪ್ಲಸ್ ಭದ್ರತೆ ನೀಡಲಾಗಿದ್ದು, ಮನೆಯ ಸುತ್ತಲೂ ಪೊಲೀಸ್ ಸರ್ಪಗಾವಲಿದೆ.





