ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದ್ವಿಪೌರತ್ವ ಅಂಶ ಪರಿಶೀಲನೆ ಮಾಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ರಾಹುಲ್ ಗಾಂಧಿ ಬ್ರಿಟನ್ ಪ್ರಜೆಯಾಗಿರುವ ಕಾರಣ ಅವರ ಭಾರತದ ಪೌರತ್ವ ರದ್ದು ಮಾಡಬೇಕೆಂದು ಕೋರಿ ಕರ್ನಾಟಕದ ಶಿಶಿರ್ ವಿಘ್ನೇಶ್ ಎಂಬುವವರು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ನೀಡಲು ಕೇಂದ್ರ ಗೃಹ ಸಚಿವಾಲಯಕ್ಕೆ ಅಲಹಾಬಾದ್ ಹೈಕೋರ್ಟ್ ಸೂಚನೆ ನೀಡಿತ್ತು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸರ್ಕಾರ ರಾಹುಲ್ ಗಾಂಧಿ ಅವರ ದ್ವಿಪೌರತ್ವ ವಿಷಯವನ್ನು ಪರಿಶೀಲನೆ ನಡೆಸುವುದಾಗಿ ತಿಳಿಸಿದೆ.
ಕೇಂದ್ರ ಗೃಹ ಸಚಿವಾಲಯವು ಅರ್ಜಿದಾರರು ಮಾಡಿದ ಪ್ರಾತಿನಿಧ್ಯವನ್ನು ಸಚಿವಾಲಯದಲ್ಲಿ ಸ್ವೀಕರಿಸಲಾಗಿದೆ. ಡಿಸೆಂಬರ್.19ರಂದು ಈ ವಿಚಾರವನ್ನು ಪಟ್ಟಿ ಮಾಡಿ ಪರಿಶೀಲನೆ ವಿವರಗಳನ್ನು ತಿಳಿಸಲಾಗುವುದು ಎಂದು ಮಾಹಿತಿ ನೀಡಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ವಿಘ್ನೇಶ್ ಅವರು, ಸರ್ಕಾರವು ತಕ್ಷಣವೇ ರಾಹುಲ್ ಗಾಂಧಿಯವರ ಭಾರತೀಯ ಪೌರತ್ವವನ್ನು ಹಿಂತೆಗೆದುಕೊಳ್ಳುತ್ತದೆ ಎಂದು ಭಾವಿಸುತ್ತೇನೆ ಎಂದಿದ್ದಾರೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…