Mysore
26
clear sky

Social Media

ಮಂಗಳವಾರ, 17 ಮಾರ್ಚ್ 2026
Light
Dark

ನಟ ದರ್ಶನ್‌ಗೆ ಮತ್ತೆ ಸಂಕಷ್ಟ: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

ಇಂದು ಕರ್ನಾಟಕದ ಪೊಲೀಸರ ಪರವಾಗಿ ಸುಪ್ರೀಂಕೋರ್ಟ್ಗೆ ವಕೀಲರು ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಿದ್ದು, ಮುಂದಿನ ವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಸುಪ್ರೀಂ ಕೋರ್ಟ್ ವಕೀಲ ಅನಿಲ್ ಸಿ ನಿಶಾನಿಯಿಂದ ಅರ್ಜಿ ಸಲ್ಲಿಕೆಯಾಗಿದ್ದು, ನಟ ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್ ಹಾಗೂ ಜಗದೀಶ್ ಆರೋಪಿಗಳ ಜಾಮೀನು ರದ್ದು ಮಾಡುವಂತೆ ಮನವಿ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೂನ್.11ರಂದು ನಟ ದರ್ಶನ್‌ ಸೇರಿ ಹಲವರು ಬಂಧನಕ್ಕೊಳಗಾಗಿದ್ದರು. ಕಳೆದ ಡಿಸೆಂಬರ್‌.13ರಂದು ರಾಜ್ಯ ಹೈಕೋರ್ಟ್‌ ದರ್ಶನ್‌ ಸೇರಿ 7 ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿತ್ತು.

Tags:
error: Content is protected !!