ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ಇಂದು ಕರ್ನಾಟಕದ ಪೊಲೀಸರ ಪರವಾಗಿ ಸುಪ್ರೀಂಕೋರ್ಟ್ಗೆ ವಕೀಲರು ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಿದ್ದು, ಮುಂದಿನ ವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಸುಪ್ರೀಂ ಕೋರ್ಟ್ ವಕೀಲ ಅನಿಲ್ ಸಿ ನಿಶಾನಿಯಿಂದ ಅರ್ಜಿ ಸಲ್ಲಿಕೆಯಾಗಿದ್ದು, ನಟ ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್ ಹಾಗೂ ಜಗದೀಶ್ ಆರೋಪಿಗಳ ಜಾಮೀನು ರದ್ದು ಮಾಡುವಂತೆ ಮನವಿ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೂನ್.11ರಂದು ನಟ ದರ್ಶನ್ ಸೇರಿ ಹಲವರು ಬಂಧನಕ್ಕೊಳಗಾಗಿದ್ದರು. ಕಳೆದ ಡಿಸೆಂಬರ್.13ರಂದು ರಾಜ್ಯ ಹೈಕೋರ್ಟ್ ದರ್ಶನ್ ಸೇರಿ 7 ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿತ್ತು.
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…
ವಾಷಿಂಗ್ಟನ್ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್ ಜಲಸಂಧಿಯ ಮೂಲಕ…
ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…
ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…
ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…
ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…