ಸಿಯೊಲ್: ದಕ್ಷಿಣ ಕೊರಿಯಾದ ʼಜೆಜು ಏರ್ʼ ವಿಮಾನ ಇಂದು ಬೆಳಿಗ್ಗೆ (ಭಾನುವಾರ) ಮುಯಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಅಪಘಾತಕಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ 179 ಮಂದಿ ಮೃತಪಟ್ಟಿದ್ದು, ಇಬ್ಬರನ್ನು ರಕ್ಷಿಸಲಾಗಿದೆ ಎಂದು ಯೊನ್ಹಾಪ್ ಸುದ್ದಿಸಂಸ್ಥೆ ವರದಿ ಮಾಡಿದೆ.
ವಿಮಾನವು ನಿಲ್ದಾಣದಲ್ಲಿ ಇಳಿಯುವ ವೇಳೆ ಲ್ಯಾಂಡಿಂಗ್ ಗೇರ್ ಸಮರ್ಪಕವಾಗಿ ಕಾರ್ಯ ನಿರ್ವಹಿಸದ ಕಾರಣ ರನ್ ವೇನಲ್ಲಿ ಜಾರಿದ ವಿಮಾನ ಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹತ್ತಿಕೊಂಡಿದೆ. ಬ್ಯಾಂಕಾದ್ ನಿಂದ ಬರುತ್ತಿದ್ದ ವಿಮಾನದಲ್ಲಿದ್ದ 175 ಪ್ರಯಾಣಿಕರು, 6 ಮಂದಿ ಸಿಬ್ಬಂದಿ ಸೇರಿ ಒಟ್ಟು 181 ಜನರಿದ್ದರು. ಇದರಲ್ಲಿ 179 ಮಂದಿ ಮೃತಪಟ್ಟಿದ್ದಾರೆ.
ಘಟನೆ ಬಗ್ಗೆ ದಕ್ಷಿಣ ಕೊರಿಯಾದ ಸರ್ಕಾರ ಸಂತಾಪ ವ್ಯಕ್ತಪಡಿಸಿದೆ. ದಕ್ಷಿಣ ಕೊರಿಯಾದ ಹಂಗಾಮಿ ಅಧ್ಯಕ್ಷ ಚೋಯ್ ಸಾಂಗ್-ಮೊಕ್ ಸಮ್ಮುಖದಲ್ಲಿ ತುರ್ತು ಸಭೆ ನಡೆಸಿದ್ದು, ಡಿಸೆಂಬರ್ 29ರಿಂದ ಜನವರಿ 4 ರವರೆಗೆ 7 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…