plan crash
ಅಹಮದಾಬಾದ್ : ಇಲ್ಲಿನ ಏರ್ ಇಂಡಿಯಾ ವಿಮಾನ ಅಪಘಾತದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಕಾಕ್ ಪಿಟ್ ವಾಯ್ಸ್ ರೆಕಾರ್ಡರ್ ಪತ್ತೆಯಾಗಿರುವುದನ್ನು ದೃಢಪಡಿಸಿದ್ದು, ವಿಮಾನದಲ್ಲಿದ್ದ 241 ಸೇರಿದಂತೆ 270 ಜನರನ್ನು ಬಲಿತೆಗೆದುಕೊಂಡ ಅಪಘಾತದ ಸಂಭವನೀಯ ಕಾರಣವನ್ನು ಕಂಡುಹಿಡಿಯಲು ಇದು ನಿರ್ಣಾಯಕ ಆವಿಷ್ಕಾರವಾಗಿದೆ ಎಂದು ಹೇಳಿದ್ದಾರೆ.
ಈ ಹಿಂದೆ, ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ನತದೃಷ್ಟ ವಿಮಾನದ ಫ್ಲೈಟ್ ಡೇಟಾ ರೆಕಾರ್ಡರ್ (ಎಫ್‍ಡಿಆರ್) ಮಾತ್ರ ಪತ್ತೆಯಾಗಿದೆ ಎಂದು ಖಚಿತಪಡಿಸಿತ್ತು.
ಜೂನ್ 12 ರಂದು ಅಹಮದಾಬಾದ್‍ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾದ ಸ್ಥಳವನ್ನು ಪರಿಶೀಲಿಸಿದ ಮತ್ತು ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ ಪಿ.ಕೆ ಮಿಶ್ರಾ ಅವರಿಗೆ ಕಪ್ಪು ಪೆಟ್ಟಿಗೆಗಳು ಪತ್ತೆಯಾಗಿರುವುದನ್ನು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಮಿಶ್ರಾ ಅವರು ಇಲ್ಲಿನ ಸಕ್ರ್ಯೂಟ್ ಹೌಸ್‍ನಲ್ಲಿ ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಎಎಐಬಿ ಮತ್ತು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಹಿರಿಯ ಅಧಿಕಾರಿಗಳೊಂದಿಗೆ ನಡೆಯುತ್ತಿರುವ ಪರಿಹಾರ ಮತ್ತು ತನಿಖಾ ಪ್ರಯತ್ನಗಳ ಕುರಿತು ಚರ್ಚಿಸಿದರು ಎಂದು ಭಾನುವಾರ ಅಧಿಕೃತ ಪ್ರಕಟಣೆ ತಿಳಿಸಿದೆ.
ಎಎಐಬಿ ವಿವರವಾದ ತನಿಖೆಯನ್ನು ಪ್ರಾರಂಭಿಸಿದೆ. ಯುಎಸ್ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿಯು ಅಂತರರಾಷ್ಟ್ರೀಯ ಪ್ರೋಟೋಕಾಲ್‍ಗಳ ಅಡಿಯಲ್ಲಿ ಸಮಾನಾಂತರ ತನಿಖೆ ನಡೆಸುತ್ತಿದೆ, ಏಕೆಂದರೆ ವಿಮಾನವು ಅಮೇರಿಕನ್ ನಿರ್ಮಿತವಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…
ಮಂಡ್ಯ : ಕಳೆದ 2024ರಲ್ಲಿ ಬೂದನೂರು ಉತ್ಸವವನ್ನು ವಿಜೃಂಭಣೆಯಿಂದ ನಡೆಸಲಾಗಿತ್ತು. ಸದರಿ ವರ್ಷವೂ ಸಹ ಅದ್ಧೂರಿಯಾಗಿ ಉತ್ಸವವನ್ನು ಆಚರಿಸಲಾಗುವುದು ಎಂದು…
ಮೈಸೂರು : ಚಲನಚಿತ್ರಗಳು, ಧಾರಾವಾಹಿಗಳು, ಟಿವಿ ಕಾರ್ಯಕ್ರಮಗಳು, ಜಾಹೀರಾತುಗಳು ಹಾಗೂ ಇತರ ವಾಣಿಜ್ಯ ಶ್ರವಣ-ದೃಶ್ಯ ಮಾಧ್ಯಮಗಳಲ್ಲಿ ಮಕ್ಕಳು (ಬಾಲ ಕಲಾವಿದರು)…
ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ…
ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…
ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…