Mysore
18
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ವಿಮಾನ ದುರಂತ ಪ್ರಕರಣ: ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

narrendra modi

ಅಹಮದಾಬಾದ್:‌ ಗುಜರಾತ್‌ನ ಅಹಮದಾಬಾದ್‌ನ ಮೇಘಾನಿ ಪ್ರದೇಶದಲ್ಲಿ ಏರ್‌ ಇಂಡಿಯಾ ವಿಮಾನ ಪತನಗೊಂಡು 242 ಮಂದಿ ಸಾವನ್ನಪ್ಪಿರುವ ದುರಂತ ನಡೆದಿದ್ದು, ಓರ್ವ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ.

ಈ ಮಧ್ಯೆ ಇಂದು ದುರಂತ ನಡೆದ ಸ್ಥಳಕ್ಕೆ ಮತ್ತು ಗಾಯಾಳು ದಾಖಲಾಗಿರುವ ಆಸ್ಪತ್ರೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ, ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿ ಹಿನ್ನೆಲೆ:- ಅಹಮದಾಬಾದ್‌ ವಿಮಾನ ಪತನ : 242 ಪ್ರಯಾಣಿಕರ ದುರ್ಮರಣ

ಬಳಿಕ ಸಿವಿಲ್‌ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಗುಜರಾತ್‌ ಸಿಎಂ ಭೂಪೇಂದ್ರ ಪಟೇಲ್‌, ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್‌ ಮೋಹನ್ ನಾಯ್ಡು, ಕೇಂದ್ರ ರಾಜ್ಯ ಸಚಿವ ಮುರಳೀಧರ್‌ ಮೊಹೋಲ್‌ ಮತ್ತು ರಾಜ್ಯ ಗೃಹ ಸಚಿವ ಹರ್ಷ ಸಾಂಘವಿ ಕೂಡ ಹಾಜರಿದ್ದರು.

Tags:
error: Content is protected !!