ದೇಶ- ವಿದೇಶ

Plane crash | 825 ಅಡಿ ಎತ್ತರದಿಂದ ಪತನಗೊಂಡ ವಿಮಾನ.!

ಅಹಮದಾಬಾದ್‌ : ಗುಜರಾತ್‌ನ ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ಟೇಕ್‌ ಆಫ್‌ ಆದ ಕೆಲವೇ ಹೊತ್ತಿನಲ್ಲಿ ಏರ್‌ ಇಂಡಿಯಾ ವಿಮಾನ ಪತನವಾಗಿದೆ. ಸುಮಾರು 242 ಪ್ರಯಾಣಿಕರಿದ್ದ ಈ ವಿಮಾನವು ಪತನವಾಗುವ ಸಂದರ್ಭದಲ್ಲಿ 825 ಅಡಿ ಎತ್ತರದಲ್ಲಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಏರ್‌ ಇಂಡಿಯಾಗೆ ಸೇರಿದ AI-171 ವಿಮಾನವು ಗುರುವಾರ ಮಧ್ಯಾಹ್ನ 1.40ರ ಸುಮಾರಿಗೆ ಅಹಮದಾಬಾದ್‌ ವಿಮಾನ ನಿಲ್ದಾಣದಿಂದ ಟೇಕ್‌ಆಫ್‌ ಆಗಿತ್ತು.

ಪತನವಾದ ಸ್ಥಳವಾದ ಮೇಘಾನಿನಗರ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳ, ಆಂಬುಲೆನ್ಸ್‌ಗಳು ಧಾವಿಸಿವೆ.

ಈ ವಿಮಾನವು ಕ್ಯಾಪ್ಟನ್‌ ಸುಮೀತ್‌ ಸಭರ್ವಾಲ್‌ ಮತ್ತು ಸಹ ಪೈಲೆಟ್‌ ಕ್ಲೈವ್‌ ಕುಂದರ್‌ ಅವರ ನೇತೃತ್ವದಲ್ಲಿತ್ತು ಎಂದು ವಿಮಾನ ಸಂಸ್ಥೆ ಹೇಳಿದೆ.

ಇನ್ನೂ ಘಟನೆ ಕುರಿತು ವಿಮಾನಯಾನ ಸಚಿವ ಆಘಾತ ವ್ಯಕ್ತಪಡಿಸಿದ್ದು, ರಕ್ಷಣೆಗೆ ಕೇಂದ್ರ ಎಲ್ಲಾ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಪತನಗೊಂಡ ವಿಮಾನದಲ್ಲಿದ್ದ ಪ್ರಯಾಣಿಕರ ಪಟ್ಟಿಯೂ ಬಿಡುಗಡೆಯಾಗಿದೆ.

ಏರ್‌ ಇಂಡಿಯಾ ತುರ್ತು ಸಂಖ್ಯೆ ಆರಂಭಿಸಿದ್ದು 1800 5691 444 ನ್ನು ಸಂಪರ್ಕಿಸುವಂತೆ ಕೋರಿದೆ.

ಆಂದೋಲನ ಡೆಸ್ಕ್

Recent Posts

ವಿಮಾನ ಪತನಕ್ಕೂ ಮುನ್ನ ಅಜಿತ್‌ ಪವಾರ್‌ ಕೊನೆಯ ಪೋಸ್ಟ್‌ ವೈರಲ್‌

ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…

23 mins ago

ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯಾತಿಗಣ್ಯರ ಸಂತಾಪ

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್‌ ಪವಾರ್‌ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…

54 mins ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ದುರ್ಮರಣ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್‌ ಪವಾರ್‌ ನಿಧನರಾಗಿದ್ದಾರೆ. ಅಜಿತ್‌…

1 hour ago

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ: ಡಿಸಿಎಂ ಅಜಿತ್‌ ಪವಾರ್‌ ಸೇರಿ 5 ಮಂದಿ ದುರ್ಮರಣ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…

2 hours ago

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

6 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

6 hours ago