ಅಹಮದಾಬಾದ್ : ಇಲ್ಲಿನ ವಿಮಾನ ನಿಲ್ದಾಣದ ಸಮೀಪ ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಪೈಕಿ 47 ಜನರು ಗುರುತನ್ನು ಡಿಎನ್‌ಎ ಪರೀಕ್ಷೆ ಮೂಲಕ ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಗುರುತು ಪತ್ತೆಯ ಪೈಕಿ 24 ಶವಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ದುರುಂತದಲ್ಲಿ ಛಿದ್ರವಾಗಿದ್ದ ಮೃತದೇಹಗಳ ಪತ್ತೆ ಡಿಎನ್‌ಎ ಪರೀಕ್ಷೆಗೆ ಕಳುಹಿಸಲಾಗಿತ್ತು.
ಗುರುವಾರ ಸಂಭವಿಸಿದ ಈ ದುರಂತದಲ್ಲಿ 241 ಪ್ರಯಾಣಿಕರು ಸೇರಿದಂತೆ 270ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.





