ವಯನಾಡು : ಕಾಂಗ್ರೆಸ್ ನಾಯಕಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅನಾವರಣಗೊಳಿಸಬೇಕಿದ್ದ ನಾಮಫಲಕವೊಂದು ಉದ್ಘಾಟನೆಗೆ ಮುನ್ನವೇ ಕುಸಿದು ಬಿದ್ದಿರುವ ಘಟನೆ ನಡೆದಿದೆ.
ಪ್ರಿಯಾಂಕಾ ಗಾಂಧಿ ವಾದ್ರಾ ಸಂಸದರಾಗಿರುವ ಕೇರಳದ ವಯನಾಡಿನಲ್ಲಿ ನಡೆದಿರುವ ಈ ಘಟನೆಯ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
ಇಲ್ಲಿನ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅನಾವರಣಗೊಳಿಸಬೇಕಿದ್ದ ನಾಮಫಲಕವು ಉದ್ಘಾಟನೆಗೊಳ್ಳುವ ಮುನ್ನವೇ ವೇದಿಕೆ ಮೇಲೆ ಮುರಿದುಬಿದ್ದಿರುವ ಘಟನೆ ನಡೆದಿದೆ.
ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಪ್ರಿಯಾಂಕಾ ಗಾಂಧಿ ಈ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಘಟನೆಗೆ ಅವರು ಪ್ರತಿಕ್ರಿಯಿಸಿರುವ ವಿಡಿಯೋ ವೈರಲ್ ಆಗುತ್ತಿದೆ.



