Mysore
27
clear sky

Social Media

ಶುಕ್ರವಾರ, 30 ಜನವರಿ 2026
Light
Dark

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ದುರ್ಮರಣ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್‌ ಪವಾರ್‌ ನಿಧನರಾಗಿದ್ದಾರೆ.

ಅಜಿತ್‌ ಪವಾರ್‌ ನಿಧಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಅವರು, ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ಭೀಕರ ವಿಮಾನ ಅಪಘಾತದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರ ಪರವಾಗಿ ನ್ನನ ಅಲೋಚನೆಗಳಿವೆ. ಈ ಅಪಾರ ದುಃಖದ ಸಮಯದಲ್ಲಿ ಶೋಕತಪ್ತ ಕುಟುಂಬಗಳಿಗೆ ನೋವನ್ನು ಭರಿಸುವ ಶಕ್ತಿ ಮತ್ತು ಧೈರ್ಯ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

ಅಜಿತ್‌ ಪವಾರ್‌ ಜೀ ಅವರು ತಳಮಟ್ಟದ ಜನಸಂಪರ್ಕ ಹೊಂದಿದ್ದ ಜನನಾಯಕರು. ಮಹಾರಾಷ್ಟ್ರದ ಜನರ ಸೇವೆಯಲ್ಲಿ ಮುಂಚೂಣಿಯಲ್ಲಿದ್ದ ಅವರು ಪರಿಶ್ರಮದ ವ್ಯಕ್ತಿತ್ವಕ್ಕೆ ಹೆಸರಾಗಿದ್ದರು. ಆಡಳಿತಾತ್ಮಕ ವಿಷಯಗಳ ಬಗ್ಗೆ ಅವರ ಜ್ಞಾನ ಮತ್ತು ಬಡವರ ಹಾಗೂ ತುಳಿತಕ್ಕೊಳಗಾದವರ ಸಬಲೀಕರಣದ ಬಗ್ಗೆ ಅವರಿಗಿದ್ದ ಉತ್ಸಾಹ ನಿಜಕ್ಕೂ ಗಮನಾರ್ಹವಾಗಿತ್ತು. ಅವರ ಅಕಾಲಿಕ ನಿಧನವು ತೀವ್ರ ಆಘಾತಕಾರಿ ಮತ್ತು ಬೇಸರದ ಸಂಗತಿಯಾಗಿದೆ. ಅವರ ಕುಟುಂಬಕ್ಕೆ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಸಾಂತ್ವನಗಳು. ಓಂ ಶಾಂತಿ ಎಂದು ಪ್ರಧಾನಿ ಮೋದಿ ಮತ್ತೊಂದು ಟ್ವೀಟ್‌ ಮಾಡಿದ್ದಾರೆ.

Tags:
error: Content is protected !!