Mysore
21
scattered clouds

Social Media

ಸೋಮವಾರ, 22 ಜೂನ್ 2026
Light
Dark

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ನವದೆಹಲಿಯಲ್ಲಿಂದು ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಹಾಗೂ ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾದರು.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಸಂಸದೀಯ ಮಂಡಳಿಯ ಸಭೆ ಹಾಗೂ ಪಕ್ಷದ ಮಿತ್ರಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ತಮಿಳುನಾಡಿನ ಅನುಭವಿ ಬಿಜೆಪಿ ನಾಯಕ ರಾಧಾಕೃಷ್ಣನ್ನ ಅವರನ್ನು ನಿನ್ನೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎನ್‌ಡಿಎ ಅಭ್ಯರ್ಥಿಯಾಗಿ ಹೆಸರಿಸಿದ್ದರು.

ಈ ಹಿನ್ನೆಲೆಯಲ್ಲಿಂದು ರಾಧಾಕೃಷ್ಣನ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಅಭಿನಂದಿಸಿದರು.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಎನ್‌ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಕ್ಕಾಗಿ ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸಿದೆ. ಅವರ ದೀರ್ಘ ವರ್ಷಗಳ ಸಾರ್ವಜನಿಕ ಸೇವೆ ಹಾಗೂ ವಿವಿಧ ಕ್ಷೇತ್ರಗಳಲ್ಲಿನ ಅನುಭವವು ನಮ್ಮ ರಾಷ್ಟ್ರವನ್ನು ಮತ್ತಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ. ಅವರು ಯಾವಾಗಲು ಪ್ರದರ್ಶಿಸಿದ ಅದೇ ಸಮರ್ಪಣೆ ಹಾಗೂ ಸಂಕಲ್ಪದೊಂದಿಗೆ ರಾಷ್ಟ್ರಕ್ಕೆ ಸೇವೆ ಸಲ್ಲಿಸುವುದನ್ನು ಮುಂದುವರಿಸಲಿ ಎಂದು ಹೇಳಿದರು.

Tags:
error: Content is protected !!