ನವದೆಹಲಿ: ನವದೆಹಲಿಯಲ್ಲಿಂದು ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಹಾಗೂ ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾದರು.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಸಂಸದೀಯ ಮಂಡಳಿಯ ಸಭೆ ಹಾಗೂ ಪಕ್ಷದ ಮಿತ್ರಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ತಮಿಳುನಾಡಿನ ಅನುಭವಿ ಬಿಜೆಪಿ ನಾಯಕ ರಾಧಾಕೃಷ್ಣನ್ನ ಅವರನ್ನು ನಿನ್ನೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎನ್‌ಡಿಎ ಅಭ್ಯರ್ಥಿಯಾಗಿ ಹೆಸರಿಸಿದ್ದರು.
ಈ ಹಿನ್ನೆಲೆಯಲ್ಲಿಂದು ರಾಧಾಕೃಷ್ಣನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಅಭಿನಂದಿಸಿದರು.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಎನ್‌ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಕ್ಕಾಗಿ ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸಿದೆ. ಅವರ ದೀರ್ಘ ವರ್ಷಗಳ ಸಾರ್ವಜನಿಕ ಸೇವೆ ಹಾಗೂ ವಿವಿಧ ಕ್ಷೇತ್ರಗಳಲ್ಲಿನ ಅನುಭವವು ನಮ್ಮ ರಾಷ್ಟ್ರವನ್ನು ಮತ್ತಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ. ಅವರು ಯಾವಾಗಲು ಪ್ರದರ್ಶಿಸಿದ ಅದೇ ಸಮರ್ಪಣೆ ಹಾಗೂ ಸಂಕಲ್ಪದೊಂದಿಗೆ ರಾಷ್ಟ್ರಕ್ಕೆ ಸೇವೆ ಸಲ್ಲಿಸುವುದನ್ನು ಮುಂದುವರಿಸಲಿ ಎಂದು ಹೇಳಿದರು.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…