ದೇಶ- ವಿದೇಶ

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ ತೀರ್ಥ’ ಸಂಕೀರ್ಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಿದರು.

ಹೊಸ ಸಂಕೀರ್ಣದಲ್ಲಿ ಸೇವಾ ತೀರ್ಥದ ಫಲಕವನ್ನು ಮೋದಿ ಅನಾವರಣಗೊಳಿಸಿದರು. ಸಂಕೀರ್ಣದ ಗೋಡೆಯ ಮೇಲೆ ದೇವನಾಗರಿ ಲಿಪಿಯಲ್ಲಿ ಕೆತ್ತಲಾದ ಹೆಸರು, ಅದರ ಕೆಳಗೆ ‘ನಾಗರಿಕ ದೇವೋ ಭವ’ ( ನಾಗರಿಕ ದೇವರಿಗೆ ಸಮಾನ) ಎಂಬ ಧ್ಯೇಯವಾಕ್ಯವಿದೆ. ರೈಸಿನಾ ಹಿಲ್ ಪ್ರದೇಶದ ಸೌತ್ ಬ್ಲಾಕ್‌ನಲ್ಲಿದ್ದ ಪ್ರಧಾನಿ ಕಾರ್ಯಾಲಯ ಇನ್ನು ಮುಂದೆ ಈ ಸೇವಾ ತೀರ್ಥಕ್ಕೆ ಸ್ಥಳಾಂತರಗೊಳ್ಳಲಿದೆ. ಜತೆಗೆ ವಿವಿಧ ಸ್ಥಳಗಳಲ್ಲಿ ನೆಲೆಗೊಂಡಿದ್ದ ಸಚಿವಾಲಯಗಳ ಕಚೇರಿ, ಸಂಪುಟ ಸಚಿವಾಲಯ ಮತ್ತು ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯದ ಕಚೇರಿ ಇಲ್ಲಿಗೆ ಸ್ಥಳಾಂತರಗೊಳ್ಳಲಿವೆ.

ಉದ್ಘಾಟನಾ ಸಮಾರಂಭದಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್, ಪ್ರಧಾನಿ ಕಾರ್ಯಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಮತ್ತು ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು ಉಪಸ್ಥಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಡಿಯ ಜನಾಂಗದ ಕಾಡಿನ ಮಕ್ಕಳು ನನ್ನ ಕಾಪಾಡಿದರು….

ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…

1 hour ago

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

11 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

14 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

14 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

14 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

14 hours ago