Mysore
24
broken clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಪ್ರಧಾನಿ ಮೋದಿ ಭೇಟಿಯಾದ ಬಿ.ವೈ.ವಿಜಯೇಂದ್ರ

ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರನ್ನು ಬಿ.ವೈ.ವಿಜಯೇಂದ್ರ ಭೇಟಿಯಾಗಿ ಆರ್ಶೀವಾದ ಪಡೆದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಹೆಮ್ಮೆಯ ಪ್ರಧಾನಿ ಮೋದಿಯವರ ಕಾರ್ಯ ಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ ಎಂದಿದ್ದಾರೆ.

ಮೋದಿ ಅವರ ಆಶೀರ್ವಾದ ಮತ್ತು ಮಾರ್ಗದರ್ಶನದಂತೆ ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ. ಇಂದಿನ ಅವರ ಭೇಟಿಯ ಸಂದರ್ಭದಲ್ಲಿ ಅವರು ಹೇಳಿದಂತಹ ಮಾತುಗಳು ಸಂಘಟನೆಯ ಬಲವೃದ್ಧಿಯ ಜೊತೆ ಜೊತೆಗೇ ರಾಷ್ಟ್ರ ಬಲಿಷ್ಠಗೊಳಿಸುವ ಮಹಾ ಕಾರ್ಯದಲ್ಲಿ ಯುವಜನರ ಸಹಭಾಗಿತ್ವ ನಿರೀಕ್ಷೆ ಮೀರಿ ತೊಡಗಿಸಿಕೊಳ್ಳುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರೇರಣೆ ನೀಡಿತು ಎಂದು ಹೇಳಿದ್ದಾರೆ.

ಭಾರತದ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳ ಪ್ರಗತಿ ಜಾಗತಿಕ ಮಟ್ಟದಲ್ಲಿ ಅಗ್ರ ಸಾಧನೆಗೈಯಲು ಮಹತ್ವದ ಪಾತ್ರ ವಹಿಸಲಿದ್ದು ಈ ನಿಟ್ಟಿನಲ್ಲಿ ಕರ್ನಾಟಕದ ಕೊಡುಗೆ ಮುಂಚೂಣಿ ಸ್ಥಾನದಲ್ಲಿರುವಂತೆ ಕಾಳಜಿ ವಹಿಸಲು ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು. ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಯೋಜಿತವಾಗಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲು ಪ್ರಧಾನಿಗಳು ಸೂಚಿಸಿದರು. ಅಲ್ಲದೇ ಪ್ರಧಾನಿ ಮೋದಿ ಜೀ ಅವರ ಭೇಟಿಯ ಅಪೂರ್ವ ಕ್ಷಣಗಳು-ಪಕ್ಷ ಬಲವರ್ಧನೆಗೆ ದೊರೆತ ಪ್ರೇರಣೆಯ ಕಿರಣಗಳು ಎಂದು ತಿಳಿಸಿದ್ದಾರೆ.

Tags:
error: Content is protected !!